
ಭಾರತ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿಗಳ ಕಛೇರಿ, ಬೆಂಗಳೂರು ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು, ಹಾಸನ ಜಿಲ್ಲೆ, ಹಾಸನ ರವರ ನಿರ್ದೇಶನದಂತೆ, ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ದಿನಾಂಕ: 29-10-2024ರಂದು ಪ್ರಕಟಣೆಗೊಳ್ಳಲಿರುವ ಕರಡು ಮತದಾರರ ಪಟ್ಟಿಯನ್ನು ಪರೀಕ್ಷಿಸಿ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು, ತಿದ್ದುಪಡಿ ಮಾಡಲು, ಹೆಸರನ್ನು ತೆಗೆದು ಹಾಕಲು ಅಥವಾ ವರ್ಗಾವಣೆ ಮಾಡಲು ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ (ಬಿ.ಎಲ್.ಓ)ಗಳ ಬಳಿ ಅವಶ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.
Voters Helpline App ಅಥವಾ www.nvsp.in ನಲ್ಲಿ ಅನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಲು ಭಾರತ ಚುನಾವಣಾ ಆಯೋಗವು 4 ಅರ್ಹತಾ ದಿನಾಂಕಗಳನ್ನು ನೀಡಿದ್ದು, 1 ಜನವರಿ 2024, 1 ಏಪ್ರಿಲ್ 2024, 1 ಜುಲೈ 2024 ಹಾಗೂ 1 ಅಕ್ಟೋಬರ್ 2024ರಂದು 18 ವರ್ಷ ಪೂರ್ಣಗೊಳ್ಳುವ ಅರ್ಹ ಯುವ ಮತದಾರರು ಹೆಸರನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಿದೆ.
ಹೊಸದಾಗಿ ಮತದಾರರ ಪಟ್ಟಿಗೆ ಹೆಸರನ್ನು ನೋಂದಾಯಿಸಲು ನಮೂನೆ-6, ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ನಮೂನೆ-7, ಮತದಾರರ ಪಟ್ಟಿಯಲ್ಲಿ ವಿಳಾಸ ಬದಲಾವಣೆ, ಹೆಸರು ಬದಲಾವಣೆ, ತಿದ್ದುಪಡಿಗಳಿಗೆ ಸಂಬಂಧಿಸಿದಂತೆ ನಮೂನೆ-8ರಲ್ಲಿ ಅರ್ಜಿಸಲ್ಲಿಸಬಹುದು ಹಾಗೂ ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಂಡಿದ್ದು ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಲು ನಮೂನೆ 6ಬಿಯಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ತಿಳಿಸಿದೆ.ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ತಹಸೀಲ್ದಾರ್.ಸಕಲೇಶಪುರ ತಾಲ್ಲೂಕು
