ಸಕಲೇಶಪುರ :- ತಾಲ್ಲೂಕು ಆಡಳಿತ ವತಿಯಿಂದ ಸಕಲೇಶಪುರ ಪಟ್ಟಣದ ಸುಭಾಷ್ ಮೈದಾನದಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ,ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಸಿಮೆಂಟ್ ಮಂಜುನಾಥ್ ವಹಿಸಿ ನಾಡ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡುತ್ತಾ ಕನ್ನಡದ ಮೇಲಿನ ಪ್ರೀತಿ ಕೇವಲ ನವೆಂಬರ್ 1ಕ್ಕೆ ಮಾತ್ರ ಸೀಮಿತವಾಗಬಾರದು. ಭಾಷೆ ನೆಲ ಜಲದ ಉಳಿವಿಗಾಗಿ ಹೋರಾಟ ಮಾಡಬೇಕಾಗಿರುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ. ಮಕ್ಕಳಿಗೆ ಕನ್ನಡದ ಇತಿಹಾಸ,ಸಂಸ್ಕೃತಿಯನ್ನು ತಿಳಿಸುವ ಕೆಲಸ ಮಾಡೋಣ. ಎಂದು ಶಾಸಕರಾದ ಸಿಮೆಂಟ್ ಮಂಜುನಾಥ್ ಹೇಳಿದರು.
ಈ ಸಂದರ್ಭದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಲಾಯಿತು. ಹಾಗೂ ತಾಲ್ಲೂಕು ಆಡಳಿತ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ 5 ಜನರನ್ನು ಗುರುತಿಸಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ತಾಲ್ಲೂಕು ಉಪನ್ಯಾಧಾಧಿಕಾರಿ, ಡಾ. ಶ್ರುತಿ, ಪುರಸಭೆ ಅಧ್ಯಕ್ಷರಾದ ಜ್ಯೋತಿ ಜಗದೀಶ್, ಉಪಾಧ್ಯಕ್ಷರಾದ ಜರಿನ,ತಾಲ್ಲೂಕು ಕಸಾಪ ಅಧ್ಯಕ್ಷರಾದ ಶಾರದ ಗುರುಮೂರ್ತಿ,ತಾಲ್ಲೂಕು ಕಾರ್ಯನಿರ್ವಾಣಧಿಕಾರಿ ಗಂಗಾಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪ, ನಟರಾಜ್, ಪುರಸಭೆ ಸದಸ್ಯರಾದ ಮೋಹನ್,ವನಜಾಕ್ಷಿ,ಅನ್ನಪೂರ್ಣೇಶ್ವರಿ, ಇಬ್ರಾಹಿಂ ಸೇರಿದಂತೆ ಇತರರು ಇದ್ದರು.