ಸಕಲೇಶಪುರ : ತಾಲ್ಲೂಕಿನ ಬೆಳಗೋಡು ಹೋಬಳಿ ಕೆಸಗುಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳ ಸುಂದರವಾಗಿ ನೆರವೇರಿತು.ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ನಿಂಗರಾಜು ರವರು ಧ್ವಜಾರೋಹಣ ನೆರವೇರಿಸಿದರು.
ಕೇಂದ್ರ ಬಿಂಧುಗಳಾದ ವಿದ್ಯಾರ್ಥಿಗಳು ರಾಷ್ಟ್ರ ಗೀತೆ ಹಾಗೂ ನಾಡ ಗೀತೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಕ್ಕಳ ಪ್ರಾರ್ಥನಾ ಗೀತೆ, ಭಕ್ತಿ ಗೀತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಅದ್ಭುತವಾಗಿ ನಡೆಯಿತು.
ಈ ಸಂದರ್ಭದಲ್ಲಿ ಸಹ ಶಿಕ್ಷಕರಾದ ರಘು ರವರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾದ ಮಮತಾ ರವರು ಕಾರ್ಯಕ್ರಮವನ್ನು ಕುರಿತು ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು.
ಇದೇ ವೇಳೆ ಮಾತನಾಡಿದ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನಿಂಗರಾಜು ರವರು ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸುತ್ತಾ ಮುಂದಿನ ಭಾರಿ ಬಹಳ ಅದ್ದೂರಿಯಾಗಿ ಆಚರಿಸಲು ಭರವಸೆ ನೀಡಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬೆಂಗಳೂರಿನ ಓರೋಸಿಸ್ ಸೀನಿಯರ್ ಪ್ರೊಡಕ್ಷನ್ ಮ್ಯಾನೇಜರ್ ಆದ ಎಚ್.ಎಂ ಶಿವಣ್ಣ ರವರು ಮಾತನಾಡಿ ಈ ಬಾರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆಸಗುಲಿ ಯಲ್ಲಿ ಕಾರ್ಯಕ್ರಮ ಆಚರಿಸುತ್ತಿರುವುದು ನನಗೆ ಬಹಳ ಉತ್ಸಾಹ ಹಾಗೂ ಸಂತೋಷವಾಯಿತು ಎಂದು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಅಥಿತಿಗಳಾಗಿ ಆಗಮಿಸಿದ್ದ ಸಕಲೇಶಪುರ ಜೆಡಿಎಸ್ ಮುಖಂಡರಾದ ದಿಲೀಪ್ ಕೆಸಗುಲಿ ರವರು ಹಾಗೂ ಶಾಲೆಯ ಎಸ್.ಡಿ.ಎಂಸಿ ಸದಸ್ಯರಾದ ಪುನೀತ್ ಕುಮಾರ್ ರವರು ಉಪಸ್ಥಿತರಿದ್ದರು.
ಜೈ ಕನ್ನಡಾಂಬೆ, ಜೈ ಕರ್ನಾಟಕ ಮಾತೆ