ಹಾಸನ : ಪ್ರತಿ ವರ್ಷ ನವೆಂಬರ್ 1 ರಂದು ಎಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.

ನಮ್ಮ ಕನ್ನಡ ನಾಡನ್ನು ಶ್ರೀಗಂಧದ ನಾಡು, ಕರುನಾಡು, ಕನ್ನಡಾಂಭೆಯ ನಾಡು, ತಾಯಿ ಭುವನೇಶ್ವರಿಯ ನಾಡು ಎಂಬೆಲ್ಲ ಹೆಸರುಗಳಿಂದ ಕರೆಯುತ್ತೇವೆ. ಹಚ್ಚಹಸುರಿನ ಸುಂದರ ಬೆಟ್ಟ ಗುಡ್ಡಗಳ. ನದಿಗಳು ಹರಿಯುವ, ಸಾಧು-ಸಂತರು-ದಾಸರು- ಶಿವಶರಣರು – ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರಿಗೆ ಒಂದು ಧೀಮಂತ ಶಕ್ತಿ ಇದೆ. ಈ ಸುಂದರ, ಸಮೃದ್ಧ ನಾಡಿನಲ್ಲಿ ಜನಿಸಿರುವುದು ನಮ್ಮೆಲ್ಲರ ಅದೃಷ್ಟ. ನವೆಂಬರ್ 1 ರಂದು ನಾವೆಲ್ಲರೂ ಅತ್ಯಂತ ಸಡಗರ-ಸಂಭ್ರಮದಿಂದ ಎಲ್ಲ ಜಾತಿ ಮತ ಧರ್ಮಗಳ ಜನರು ಸೇರಿ ಒಗ್ಗೂಡಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತೇವೆ ಎಂದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸರೋಜಾ ರವರು ತಿಳಿಸಿದರು.

ನವೆಂಬರ್ 1 ರಂದು ರಾಜ್ಯದಾದ್ಯಂತ ರಾಜ್ಯೋತ್ಸವ ದಿನವನ್ನು ಕೆಂಪು ಮತ್ತು ಹಳದಿ ಕನ್ನಡ ಧ್ವಜದ ಮೂಲಕ ರಾಜ್ಯದಾದ್ಯಂತ ಅತ್ಯಂತ ಸಂತೋಷ ಮತ್ತು ಸಡಗರದಿಂದ ಆಚರಿಸಲಾಗುತ್ತದೆ. ಕನ್ನಡ ಗೀತೆ ‘ಜಯ ಭಾರತ ಜನನೀಯ ತನುಜಾತೆ. ಜಯಹೇ ಕರ್ನಾಟಕ ಮಾತೆ’ ಹಾಡುವುದರೊಂದಿಗೆ ಇಡೀ ರಾಜ್ಯವು ಈ ದಿನದಂದು ಕನ್ನಡದ ಹಬ್ಬವನ್ನು ಆಚರಣೆ ಮಾಡುತ್ತಿದೆ.

ಕರ್ನಾಟಕ ಹೆಸರು ಬಂದದ್ದು ಹೇಗೆ ಎಂದು ನೋಡುವುದಾದರೆ…, ಕರ್ನಾಟಕ ಪದದ ಮೂಲ ಸಂಸ್ಕೃತ ಭಾಷೆ. ಸಂಸ್ಕೃತದ ಕನ್ನಡ ಎಂಬ ಪದದಿಂದ ಕರ್ನಾಟಕ ಹುಟ್ಟಿದೆ. ಕನ್ನಡಿಗರ ನಾಡು, ಕನ್ನಾಡು, ಕನ್ನಡ ನಾಡು ಎಂಬುದು ಇದರ ಅರ್ಥ.ಕರ್ನಾಟಕ ರಾಜ್ಯದ ಏಕೀಕರಣಕ್ಕೆ ಕೀರ್ತಿ ಗಳಿಸಿದ ಇತರ ವ್ಯಕ್ತಿಗಳಲ್ಲಿ ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಕೆ ಶಿವರಾಮ ಕಾರಂತ, ಎ ಎನ್ ಕೃಷ್ಣ ರಾವ್ ಮತ್ತು ಬಿ ಎಂ ಶ್ರೀಕಂಠಯ್ಯ ರವರು ಪ್ರಮುಖರು.ಕನ್ನಡಾಂಬೆಯ ಮಕ್ಕಳಾದ ನಾವು ಈ ಮಾಹಿತಿಯನ್ನು ಸದಾ ತಿಳಿದಿರಬೇಕು.

ಅಷ್ಟೇ ಅಲ್ಲ ಕರ್ನಾಟಕಕ್ಕೆ ಆಗಮಿಸುವ ಅನ್ಯಭಾಷಿಗರಿಗೆ ಕನ್ನಡವನ್ನು ಕಲಿಸಿ, ನಾವು ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ವಿಸ್ತರಿಸಬೇಕು ಎಂದು ಪ್ರಾಥಮಿಕ ಶಾಲೆಯ ಶಿಕ್ಷಕರಾದ ರಮೇಶ್ ರವರು ತಿಳಿಸಿದರು.

ಈ ಕಾರ್ಯಕ್ರಮಕ್ಕೆ ಜೋಡಿಕೃಷ್ಣಾಪುರದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಸರೋಜಾ ರವರು, ಸಹ ಶಿಕ್ಷಕರದ ಸುಧಮಣಿ, ರಮೇಶ್, ಮಂಜೇಗೌಡ ರವರು, ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಬಿರಾರ್ಥಿಗಳು ಭಾಗವಹಿಸಿದ್ದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *