ಹೆತ್ತೂರು : ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 69ನೇಕನ್ನಡ ರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಸದಸ್ಯೆ ಸುಮರವರು ವಹಿಸಿದ್ದರು.

ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಶ್ರೀ ಸಚಿನ್ ಹೆಚ್.ಎಂ ರಾಷ್ಟ್ರ ಧ್ವಜದ ಆರೋಹಣವನ್ನು ಮತ್ತು ಕರ್ನಾಟಕ ಧ್ವಜದ ಧ್ವಜಾರೋಹಣವನ್ನು ಕೆಪಿಎಸ್ ಪ್ರಾಂಶುಪಾಲ ಮಂಜುನಾಥ ಬಿ.ಡಿ. ನೆರವೇರಿಸಿದರು.

ಉಪಪ್ರಾಂಶುಪಾಲರಾದ ಭಾಸ್ಕರ ಬಿ. ಪ್ರಾಸ್ತಾವಿಕವಾಗಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹೆತ್ತೂರು ಹೋಬಳಿಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ರವಿ ಕುಮಾರ್ ಹೆಚ್.ಪಿ. ಕನ್ನಡ ಭಾಷೆ, ಸಾಹಿತ್ಯದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಹೇಮಂತ್ ಕುಮಾರ್, ಶಾಲಾಭಿವೃದ್ಧಿ ಸಮಿತಿ ಸದಸ್ಯಹರೀಶ್ ಕರಡಿಗಾಲ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಸತೀಶ್ ಮೊದಲಾದವರು ಉಪಸ್ಥಿತರಿದ್ದರು.

ಸಂಸ್ಥೆಯ ಉಪನ್ಯಾಸಕರು, ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.

ಕನ್ನಡ ಶಿಕ್ಷಕಿ ಚಿನ್ನಮ್ಮ ನಿರೂಪಿಸಿದರು. ಶಿಕ್ಷಕಿಯರಾದ ಮಧುಕಲಾ ಸ್ವಾಗತಿಸಿ, ಅಶ್ವಿನಿ ವಂದಿಸಿದರು.

ಇದೇ ಸಂದರ್ಭದಲ್ಲಿ ಅತಿಥಿಗಳನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು.

ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *