ಕರ್ನಾಟಕ j: ರಾಜ್ಯದಲ್ಲಿ ಮುಂಗಾರಿಗೆ ಮುನ್ನವೇ ವರುಣಾರ್ಭಟ ಶುರುವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ.ಬೆಂಗಳೂರು, ಚಿಕ್ಕಮಗಳೂರು, ಉಡುಪಿ, ರಾಮನಗರ, ಕೊಡಗು, ಚಾಮರಾಜನಗರ, ಹಾಸನ, ಶಿವಮೊಗ್ಗ, ಬೆಳಗಾವಿ ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ 80 ಕ್ಕೂ ಹೆಚ್ಚು ಮರಗಳು ಉರುಳಿ ಬಿದ್ದಿವೆ.ಶಿವಮೊಗ್ಗ, ಕಲಬುರಗಿ ಜಿಲ್ಲೆಗಳಲ್ಲಿ ಮಳೆಗೆ ಮನೆಗಳ ಚಾವಣಿ ಹಾರಿ ಹೋಗಿವೆ. ಬೆಂಗಳೂರಿನಲ್ಲಿ ಸಂಜೆ ಸುರಿದ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಕೆಲ ಕಾಲ ಜನಜೀವನ ಅಸ್ತವ್ಯಸ್ತಗೊಂಡಿತ್ತು.ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿ ಕೋಹಳ್ಳಿಯ ಅಮೂಲ್ ಜಯಸಿಂಗ್ ಕಾನಡೆ(24), ದೇಸಾರಹಟ್ಟಿ ಗ್ರಾಮದ ವಿಠ್ಠಬಾಯಿ ಮಹದೇವ ಕಾಮಕರ್ (50), ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ರೇವೂರ (ಬಿ) ಗ್ರಾಮದಲ್ಲಿ ರೈತ ಮಾಳಪ್ಪ ದತ್ತಪ್ಪ ಪೂಜಾರಿ (32) ಸಿಡಿಲು ಬಡಿದು ಮೃತಪಟ್ಟಿದ್ದಾರೆ.ಮುಂದಿನ 48 ಗಂಟೆ ಭಾರೀ ಮಳೆಮುಂದಿನ 48 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಎರಡು ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *