
ಸಕಲೇಶಪುರ : ಮಕ್ಕಳ ಪ್ರತಿಭೆಯನ್ನು ಹೊರ ತರುವ ನಿಟ್ಟಿನಲ್ಲಿ ಲಯನ್ಸ್ ಲಿಯೋ ಕ್ಲಬ್ ವತಿಯಿಂದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ತಾಲೂಕು ಲಯನ್ಸ್ ಕ್ಲಬ್ ಕಾರ್ಯದರ್ಶಿ ವೆಂಕಟೇಶ್ ಹೇಳಿದರು.
ಪಟ್ಟಣದ ಲಯನ್ಸ್ ಭವನದ ಆವರಣದಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಫರ್ದೆಯನ್ನು ಉದ್ದೇಶಿಸಿ ಮಾತನಾಡಿ ಪ್ರತಿಯೊಬ್ಬ ಮಕ್ಕಳಲ್ಲೂ ಒಂದಲ್ಲಾ ಒಂದು ಪ್ರತಿಭೆ ಇರುತ್ತದೆ. ಹಲವು ಮಕ್ಕಳು ಪ್ರತಿಭೆಯನ್ನು ಹೊಂದಿದ್ದರು ಅದನ್ನು ಹೊರ ಹಾಕಲು ಸಾಧ್ಯವಾಗುವುದಿಲ್ಲ.
ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಮಕ್ಕಳ ಪ್ರತಿಭೆಯನ್ನು ಹೊರತರುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು.ಹೀಗಾಗಿ ಲಯನ್ಸ್ ಸಂಸ್ಥೆಯನ್ನು ಮಕ್ಕಳ ಪ್ರತಿಭೆಯನ್ನು ಹೊರ ತರುವ ನಿಟ್ಟಿನಲ್ಲಿ ಚಿತ್ರಕಲಾ ಸ್ಫರ್ದೆಯನ್ನು ಆಯೋಜಿದೆ.
ಇಂತಹ ಅವಕಾಶಗಳನ್ನು ಮಕ್ಕಳೂ ಸದ್ಬಳಕೆ ಮಾಡಿಕೊಳ್ಳಬೇಕು. ನಗರ ಪ್ರದೇಶಗಳಲ್ಲಿ ಮಕ್ಕಳ ಪ್ರತಿಭೆ ಅನಾವರಣಗೊಳ್ಳಲು ಹೆಚ್ಚಿನ ಅವಕಾಶಗಳಿರುತ್ತದೆ ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಪ್ರತಿಭೆ ಹೊರ ಹೊಮ್ಮಲು ಹೆಚ್ಚಿನ ಅವಕಾಶಗಳಿರುವುದಿಲ್ಲ.
ಈ ನಿಟ್ಟಿನಲ್ಲಿ ಲಯನ್ಸ್ ಸಂಸ್ಥೆ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅದ್ಯಕ್ಷ ಕೃಷ್ಣಪ್ಪ ಪೂಜಾರಿ, ಚಿತ್ರಕಲಾ ಶಿಕ್ಷಕ ಶ್ರೀಧರ್, ಲಯನ್ಸ್ ಪದಾಧಿಕಾರಿಗಳಾದ ವಿಶ್ವನಾಥ್ ಪೂಜಾರಿ, ಗಿರೀಶ್ ಮಂಜು ಸೇರಿದಂತೆ ಇತರರು ಹಾಜರಿದ್ದರು.
