ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಅಲ್ಲದೇ ರಾಜ್ಯದ ಈ , ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಕೂಡ ಘೋಷಿಸಿದೆ.ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ ಯೆಲ್ಲೊ ಅಲರ್ಟ್‌ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು ಹಾಗೂ ಕರಾವಳಿಯ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಹೆಚ್ಚಿನ ಸ್ಥಳಗಳಲ್ಲಿ ಜಿಟಿಜಿಟಿ ಮಳೆ ಹಾಗೂ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜತೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗೆ ಶುಕ್ರವಾರ ಯೆಲ್ಲೊ ಅಲರ್ಟ್‌ ನೀಡಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *