ಹಾಸನದಲ್ಲಿ ರೀಲ್ಸ್ ಮಾಡಲು ವಿದ್ಯಾರ್ಥಿಗಳು ಹುಚ್ಚಾಟ ನಡೆಸಿದ್ದಾರೆ. ನಡುರಸ್ತೆಯಲ್ಲಿಯೇ ಪೆಟ್ರೋಲ್ ಬಾಂಬ್ ಸ್ಪೋಟಿಸಿದ್ದಾರೆ.

ಇನ್ಸ್ಟಾಗ್ರಾಮ್ ನಲ್ಲಿ ಪೆಟ್ರೋಲ್ ಬಾಂಬ್ ಸ್ಪೋಟದ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.

ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿಯಲ್ಲಿ ಘಟನೆ ನಡೆದಿದೆ.ಪ್ಲಾಸ್ಟಿಕ್ ಕವರ್ ನಲ್ಲಿ ಪೆಟ್ರೋಲ್ ತುಂಬಿಸಿಕೊಂಡು ನಡು ರಸ್ತೆಯಲ್ಲಿಯೇ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಮೂವರು ಹುಚ್ಚಾಟ ಮೆರೆದಿದ್ದಾರೆ.

ಹಾಸನದ ಇಬ್ಬರು, ಕುಣಿಗಲ್ ತಾಲೂಕಿನ ಒಬ್ಬ ವಿದ್ಯಾರ್ಥಿ ಈ ರೀತಿ ಹುಚ್ಚಾಟ ಮೆರೆದಿದ್ದಾರೆ. ಬಾಂಬ್ ಸ್ಪೋಟದ ಸ್ಥಳದಲ್ಲಿ ಲಾರಿ ಕೂಡ ಇದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಈ ವಿಡಿಯೋ ಜಾಲತಾಣದಲ್ಲಿ ಹರಿದಾಡಿದ್ದು, ಹುಚ್ಚಾಟ ನಡೆಸಿದ ಯುವಕ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *