
ಸಕಲೇಶಪುರ : ತಾಲೂಕಿನ ಆನೆ ಮಹಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಸತಿಗಾಲ ಗ್ರಾಮದ ಬಸ್ ಸ್ಟಾಪ್ ಪಕ್ಕದಲ್ಲಿರುವ ಶ್ರೀ ಚಾಮುಂಡೇಶ್ವರಿ ಅಮ್ಮನವರ ನಾಲ್ಕನೇ ವರ್ಷದ ಕಾರ್ತಿಕ ಮಹೋತ್ಸವವು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ತುಂಬಾ ವಿಜೃಂಭಣೆಯಿಂದ ನಡೆಯಿತು.
ಆಗಮಿಸಿದ ಎಲ್ಲ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಅನ್ನ ಸಂತರ್ಪಣೆ ನೆರವೇರಿಸಲಾಯಿತು, ಭಕ್ತಾದಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು, ಅಕ್ಕ ಪಕ್ಕದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾದರು,
ಈ ಸಂದರ್ಭದಲ್ಲಿ ಗ್ರಾಮಸ್ಥರು ಭಕ್ತಾದಿಗಳು ಇತರರು ಹಾಜರಿದ್ದರು.


