ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಮುಷ್ಕರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಭೆಯ ಹೈಲೈಟ್ಸ್

ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು.

ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ enforcement ಮಾಡಲಾಗುವುದು.

ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದರು.

ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿಎಂ ತಿಳಿಸಿದರು.

ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಎಚ್ಚರಿಕೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *