ಹಾಸನ : ನಗರದ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2024ರ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
ಈ ಸಮಾರಂಭದ ಉದ್ಘಾಟನೆಯನ್ನುಅಪ್ಪಾಜಿಗೌಡ ನಿವೃತ್ತ ಪ್ರಾಂಶುಪಾಲರು ಮತ್ತು ಸ್ಥಳೀಯ ಲೇಖಕರು ನೆರವೇರಿಸಿದರು.
ಅಧ್ಯಕ್ಷತೆಯನ್ನು ನಾಗರಾಜ್ ಪ್ರಾಂಶುಪಾಲರು, ಜಿಲ್ಲಾ ತರಬೇತಿ ಸಂಸ್ಥೆ ಇವರು ವಹಿಸಿದರು.
ಶಿವೇಶ್ ನಿವೃತ್ತ ಆಂಗ್ಲ ಉಪನ್ಯಾಸಕರು ಮತ್ತು ಸ್ಥಳೀಯ ಲೇಖಕರು ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿದರು.
ಈ ಗ್ರಂಥಾಲಯ ಸಪ್ತಾಹ ಅಂಗವಾಗಿ ಏರ್ಪಡಿಸಿದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಶಾಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಹಾಗೂ ನಮ್ಮ ಗ್ರಂಥಾಲಯದಲ್ಲಿ ಲಭ್ಯವಿರುವ ಪುಸ್ತಕಗಳ ಅಧ್ಯಯನದಿಂದ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಹಿರಿಯ ನಾಗರೀಕರನ್ನು ಗುರುತಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಮಕ್ಕಳು ಹಾಗೂ ವಿದ್ಯಾರ್ಥಿಗಳು ಸಾರ್ವಜನಿಕ ಓದುಗರು, ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯದ ಸಿಬ್ಬಂದಿ ವರ್ಗದವರು ಮತ್ತು ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.