ಹಾಸನ : ತಾಲೂಕಿನ ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ. ಎಸ್ಸಿ (ಹಾನ್ಸ್) ಕೃಷಿ ವಿದ್ಯಾರ್ಥಿಗಳು ಹಾಗೂ ಆಹಾರ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಹಾಸನ ತಾಲ್ಲೂಕು ದುದ್ದ ಹೋಬಳಿಯ ಕೆ. ಹೊಸಹಳ್ಳಿ ಗ್ರಾಮದಲ್ಲಿ ಪನ್ನೀರ್ ತಯಾರಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ವಿಶ್ವನಾಥ ಅಂಗಡಿ ಕೃಷಿ ಮಹಾವಿದ್ಯಾಲಯ ಕಾರೆಕೆರೆ,ಹಾಸನ ಆಗಮಿಸಿದ್ದರು.

ಈ ಕಾರ್ಯಕ್ರಮದಲ್ಲಿ ಆಹಾರ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಪನ್ನೀರ್ ತಯಾರಿಕೆಯ ಬಗ್ಗೆ ವಿವರವಾದ ಮಾಹಿತಿಯನ್ನು ನೆರೆದ ಜನರಿಗೆ ತಿಳಿಸಿದರು.

ಹಾಗೂ ಪನ್ನೀರ್ ತಯಾರಿಕೆಯು ಸುಲಭ ಎಂಬುದನ್ನು ತಿಳಿಸಿಕೊಟ್ಟರು.

ನಂತರದಲ್ಲಿ ಪನ್ನೀರ್ ಆಹಾರದಲ್ಲಿ ಬಳಸುವುದರಿಂದ ಉತ್ತಮವಾದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂಬುದನ್ನು ತಿಳಿಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಊರಿನ ಹಿರಿಯರು,ಪ್ರಗತಿ ಪರ ರೈತರು,ರೈತಮಹಿಳೆಯರು,ಹಾಗೂ ಕೆ ಹೊಸಹಳ್ಳಿಯ ಎಲ್ಲಾ ಜನಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *