*ದಿನಾಂಕ 26-11-2024 ರಂದು ಮಂಗಳವಾರ ಬೆಳಿಗ್ಗೆ 11-00 ಗಂಟೆಗೆ ಸಕಲೇಶಪುರ ತಹಸೀಲ್ದಾರ್ ರವರ ಕಛೇರಿಯ ಆವರಣದಲ್ಲಿರುವ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಯ ಎದುರು “ಸಂವಿಧಾನ ದಿನಾಚರಣೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ಸಿ.ಎಂ.ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಸಕಲೇಶಪುರ ಪುರಸಭೆಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು,ಸಂಘ-ಸಂಸ್ಥೆಗಳ ಮುಖಂಡರುಗಳು ದಲಿತ ಸಂಘಟನೆಗಳ ಮುಖಂಡರುಗಳು ಹಾಗೂ ಪದಾಧಿಕಾರಿಗಳು ತಾಲೂಕಿನ ಎಲ್ಲಾ ಸರ್ಕಾರಿ ಕಛೇರಿಗಳ ಅಧಿಕಾರಿಗಳು ನೌಕರವರ್ಗ ಎಲ್ಲಾ ಕಾಲೇಜು/ ಶಾಲಾ ಪ್ರಾಂಶುಪಾಲರು/ಮುಖ್ಯೋಪಾಧ್ಯಾಯರುಗಳು,ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳು,ತಾಲೂಕಿನ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಿಬ್ಬಂದಿಗಳು,ಸ್ವಸಹಾಯ ಸಂಘ ಸ್ತ್ರೀಶಕ್ತಿ ಸಂಘಗಳ ಸದಸ್ಯರುಗಳು ಮತ್ತು ಮಾಧ್ಯಮ ಮಿತ್ರರುಗಳು ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಕಲೇಶಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮೋಹನ್ ಕುಮಾರ್ ಸಿ.ಎಂ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.