ಸಕಲೇಶಪುರ :- ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿಯ ಹಿರಿಯುರು ಕೂಡಿಗೆಯಲ್ಲಿರುವ ಶ್ರೀ ಎಚ್.ಡಿ ದೇವೇಗೌಡರ ಸಾರ್ವಜನಿಕ ಸಮುದಾಯ ಭವನದಲ್ಲಿ ಸ್ನೇಹ ಬಳಗ ಆಯೋಚಿಸಿ, ಶ್ರೀ ಆದಿಚುಂಚನಗಿರಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಎರಡನೇ ವರ್ಷದ “ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರವನ್ನು ಏರ್ಪಡಿಸಲಾಯಿತು .
ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ ಶಿವ ಸ್ವಾಮಿಯವರು ಉದ್ಘಾಟನೆ ಮಾಡಿದರು.
ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರಕ್ಕೆ ಗ್ರಾಮ ಪಂಚಾಯಿತಿಯ ಸುತ್ತಮುತ್ತಲಿನ ಹಳ್ಳಿಯ ಸುಮಾರು 500ಕ್ಕೂ ಹೆಚ್ಚು ಜನರು ನೇತ್ರ ತಪಾಸಣೆ ಹಾಗೂ ಅಧಿಕ ರಕ್ತದ ಒತ್ತಡ ಹಾಗೂ ಮಧುಮೇಹಕ್ಕೆ ಸಂಬಂಧಿಸಿದಂತೆ ತಪಾಸಣೆ ಮಾಡಿಸಿ ಕೊಂಡರು.
ಇದರಲ್ಲಿ 37ಜನರನ್ನು ನೇತ್ರ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ವೈದ್ಯಾಧಿಕಾರಿಗಳಾದ ಮಹೇಶ್, ಶುಕ್ರವಾರ ಸಂತೆ ಆಸ್ಪತ್ರೆಯ ವೈದ್ಯರಾದ ವಾಸುದೇವ ಶಣೈ, ಆದಿಚುಂಚನಗಿರಿ ವೈದ್ಯರಾದ ಡಾಕ್ಟರ್ ಶಾಲಿನಿ, ಸೇರಿದಂತೆ ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯಿತಿಯ ಸದಸ್ಯರುಗಳು, ಗ್ರಾಮಸ್ಥರುಗಳು ನೆರೆದಿದ್ದರು.