ಸಕಲೇಶಪರ: ಸರ್ಕಾರಿ ನೌಕರರು ಹಲವು ಸವಾಲುಗಳನ್ನು ಎದುರಿಸುತ್ತಿದ್ದು ನೌಕರರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಆದ್ಯತೆ ನೀಡುತ್ತೇನೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ತಮ್ಮಣ್ಣ ಶೆಟ್ಟಿ ಹೇಳಿದರು.

ಪಟ್ಟಣದ ತಾಲೂಕು ಸರ್ಕಾರಿ ನೌಕರರ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿ ಇಂದು ಕೆಲಸ ಮಾಡುವಾಗ ಸರ್ಕಾರಿ ನೌಕರರು ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಕೆಲವು ಇಲಾಖೆಗಳಲ್ಲಿ ಕಾರ್ಯದ ಒತ್ತಡ ಮಿತಿ ಮೀರಿದೆ. ಇದರಿಂದ ಸರ್ಕಾರಿ ನೌಕರರು ವಿಪರೀತ ಒತ್ತಡ ಎದುರಿಸುವಂತಾಗಿದೆ. ಅಲ್ಲದೆ ಕೆಲವು ಇಲಾಖೆಗಳಲ್ಲಿ ನೌಕರರಿಗೆ ಹೆಚ್ಚಿನ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಿಲ್ಲ. ಈ ನಿಟ್ಟಿನಲ್ಲಿ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಸರ್ಕಾರಿ ನೌಕರರ ಸಂಘದಲ್ಲಿ ಯಾವುದೆ ರೀತಿಯ ರಾಜಕೀಯಗಳು ನುಸುಳದಂತೆ ನೋಡಿಕೊಳ್ಳುತ್ತೇನೆ ಎಂದರು.

ಮುಖ್ಯ ಅತಿಥಿಯಾಗಿ ಸಮಾರಂಭಕ್ಕೆ ಆಗಮಿಸಿದ್ದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮುರುಳಿ ಮೋಹನ್ ಮಾತನಾಡಿ ಸರ್ಕಾರಿ ನೌಕರರ ಸಂಘದ ಎಲ್ಲಾ ಚಟುವಟಿಕೆಗಳಿಗೂ ನಾನು ಸದಾ ನೆರವು ನೀಡುತ್ತೇನೆ ಹಾಗೂ ಸರ್ಕಾರಿ ನೌಕರರ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸಲು ಧ್ವನಿಯಾಗಿರುತ್ತೇನೆ ಎಂದರು.

ಈ ಸಂಧರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ, ಬಿಜೆಪಿ ಮುಖಂಡ ಧರಣೇಶ್, ಸಂಘದ ಗೌರವ ಅಧ್ಯಕ್ಷ ಶಾಂತಕುಮಾರ್, ಸಂಘದ ಕಾರ್ಯದರ್ಶಿ ಜಗದೀಶ್, ಪದಾಧಿಕಾರಿಗಳಾದ ಸಲೀಂ, ಕಸಾಪ ತಾಲೂಕು ಅಧ್ಯಕ್ಷೆ ಶಾರದಾ ಗುರುಮೂರ್ತಿ ಹಾಗೂ ಮಾಜಿ ಗೌರವಾಧ್ಯಕ್ಷರು ಕೆಂಚಯ್ಯ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಹಾಜರಿದ್ದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *