ಬೆಂಗಳೂರು : ರಾಜ್ಯದ ವಿವಿದ ವಿಶೇಷ ಶಾಲೆಯ ಉತ್ತಮ ಶಿಕ್ಷಕರಿಗೆ ಇಂದು ಬೆಂಗಳೂರಿನ ಕಂಠೀರವ ಒಳ ಕ್ರೀಡಾಂಗಣದಲ್ಲಿ ನಡೆದ ವಿಶ್ವ ವಿಕಲ ಚೇತನರ ದಿನಾಚರಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಕಲೇಶಪುರದ ಎನ್.ಕೆ.ಗಣಪಯ್ಯ ವಿಶೇಷ ಶಾಲೆಯ ಪ್ರಾಂಶುಪಾಲರಾದ ಲೋಕೇಶ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಮಾಡಿದರು.
ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಲೋಕೇಶ್ ಅವರಿಗೆ ರೋಟರಿ ಟ್ರಸ್ಟ್ ಹಾಗೂ ರೋಟರಿ ಕ್ಲಬ್‌ನ ಅದ್ಯಕ್ಷರು ,ಶಾಲೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.