ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸದಾಶಿವನಗರದ ತಮ್ಮ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪಡೆದರು.

೧೯೯೯ ರಿಂದ ೨೦೦೪ ರವರೆಗೆ ಕರ್ನಾಟಕದ ೧೬ ನೇ ಮುಖ್ಯಮಂತ್ರಿಯಾಗಿದ್ದರು ಮತ್ತು ೨೦೦೪ ರಿಂದ ೨೦೦೮ ರವರೆಗೆ ಮಹಾರಾಷ್ಟ್ರದ ೧೯ ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಡಿಸೆಂಬರ್ ೧೯೮೯ ರಿಂದ ಜನವರಿ ೧೯೯೩ ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.೧೯೭೧ ರಿಂದ ೨೦೧೪ ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ ೨೦೨೩ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *