ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಶ್ರೀ.ಎಸ್.ಎಂ.ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರ ಬೆಳಗಿನ ಜಾವ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವು ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ.

ಮುಂದುವರೆದು ದಿವಂಗತರ ಅಂತ್ಯಕ್ರಿಯೆಯನ್ನು 2:11.12.20248 ಬುಧವಾರದಂದು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ದಿವಂಗತರ ಗೌರವಾರ್ಥವಾಗಿ ದಿನಾಂಕ:11.12.2024ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ. ದಿನಾಂಕ:10.12.2024 ರಿಂದ ದಿನಾಂಕ:12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು ಹಾಗೂ ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವುದು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *