ಕರ್ನಾಟಕ : ನಾಡು ಕಂಡ ಅಪ್ರತಿಮ ನಾಯಕ, ಸಜ್ಜನ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ನಾಡಿನಾದ್ಯಂತ ಎಸ್‌ಎಂಕೆ ಅವರ ಅಗಲಿಕೆಗೆ ಸಂತಾಪ ಸೂಚಿಸಲಾಗುತ್ತಿದೆ. ಅಪಾರ ಅಭಿಮಾನಿಗಳು, ಕುಟುಂಬಸ್ಥರು, ರಾಜಕೀಯ ಮುಖಂಡರು ಎಸ್‌.ಎಂ ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಭಾವಪೂರ್ಣ ನಮನ ಸಲ್ಲಿಸುತ್ತಿದ್ದಾರೆ.

ಎಸ್‌.ಎಂ ಕೃಷ್ಣ ಅಂತ್ಯಕ್ರಿಯೆ ನಾಳೆ ಅವರ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ನಾಳೆ ಬೆಳಗ್ಗೆ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಅವರ ನಿವಾಸದಿಂದ ಮದ್ದೂರಿಗೆ ತೆಗೆದುಕೊಂಡು ಹೋಗಲಾಗುತ್ತಿದೆ. ತೆರೆದ ವಾಹನದ ಮೂಲಕ ಹೊರಡಲಿರೋ ಎಸ್‌ಎಂಕೆ ಅಂತಿಮ ಮೆರವಣಿಗೆಯಲ್ಲಿ ಅಲ್ಲಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನದವರೆಗೂ ಮದ್ದೂರಿನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಇದಾದ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್‌.ಎಂ ಕೃಷ್ಣ ಅವರ ಅಂತಿಮ ವಿಧಿವಿಧಾನಗಳು ನೆರವೇರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *