ಹಾಸನ: ಹನುಮ ಜಯಂತಿ ಪ್ರಯುಕ್ತ ನಗರದ ರೈಲ್ವೆ ನಿಲ್ದಾಣದ ಎದುರು ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಬೆಳಿಗ್ಗಿನಿಂದ ಸಂಜೆವರೆಗೂ ವಿವಿಧ ಸೇವಾ ಕಾರ್ಯಕ್ರಮ ಹಾಗೂ ಮದ್ಯಾಹ್ನ ಅನ್ನಸಂತರ್ಪಣೆಯನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.

ಶುಕ್ರವಾರ ಬೆಳಿಗ್ಗೆ ಸುಪ್ರಭಾತ ಸೇವೆ, ಅಭಿಷೇಕ, ೮ ಗಂಟೆಗೆ ಮಹಾಮಂಗಳಾರತಿ, ೯ಕ್ಕೆ ಮಾರುತಿ ಹೋಮ, ಮದ್ಯಾಹ್ನ ೧೨ ಗಂಟೆಗೆ ಪೂರ್ಣಾಹುತಿ ಇದಾದ ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನೆರವೇರಿತು. ಮದ್ಯಾಹ್ನ ೧೨:೩೦ಕ್ಕೆ ಸಾವಿರಾರು ಜನರಿಗೆ ಅನ್ನಸಂತರ್ಪಣೆ ನೆರವೇರಿಸಿದರು. ಸಂಜೆ ೭:೩೦ಕ್ಕೆ ಮಾರುತಿ ಉತ್ಸವ ನಗರದಲ್ಲಿ ಸಾಗಿತು. ರಾತ್ರಿ ೯:೩೦ಕ್ಕೆ ಮಹಾಮಂಗಳಾರತಿ ಹಾಗೂ ಲಾಲಿ ಕಾರ್ಯಕ್ರಮ ನೆರವೇರಿಸಲಾಯಿತು.

ಇದೆ ವೇಳೆ ದೇವಾಲಯದ ಅರ್ಚಕರಾದ ರಕ್ಷಿತ್ ಭಾರಧ್ವಜ್ ಮಾರುತಿ ಜಯಂತಿ ಬಗ್ಗೆ ಮಾಹಿತಿ ನೀಡಿದರು.

ಈಸಂದರ್ಭದಲ್ಲಿ ನಗರದ ಶ್ರೀ ನೀರು ಬಾಗಿಲು ಆಂಜನೇಯ ದೇವಸ್ಥಾನ ಹಾಗೂ ಜವರಾಯಪಟ್ಟಣದ ದೇವಸ್ಥಾನ ಸೇರಿದಂತೆ ವಿವಿಧ ಭಾಗಗಳಲ್ಲಿ ದೇವರಿಗೆ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *