
ರಜೌರಿ (ಜಮ್ಮು ಮತ್ತು ಕಾಶ್ಮೀರ) : ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಧಿಕಾರಿಗಳ ಪ್ರಕಾರ, ಜಿಲ್ಲೆಯ ದಸ್ಸಾಲ್ ಅರಣ್ಯ ಪ್ರದೇಶದಲ್ಲಿ ಎನ್‌ಕೌಂಟರ್ ವರದಿಯಾಗಿದೆ. ʻರಾಜೌರಿಯ ದಸ್ಸಾಲ್ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆʼ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಗುರುವಾರ, ಬಾರಾಮುಲ್ಲಾದಲ್ಲಿ ನಿಷೇಧಿತ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ಗೆ ಸಂಬಂಧಿಸಿದ ಇಬ್ಬರು ಭಯೋತ್ಪಾದಕರನ್ನು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಬಂಧಿಸಲಾಯಿತು.
