ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ರವರೇ ಮುಖ್ಯ ಮಂತ್ರಿ ಆಗಬೇಕೆಂದು ಜನರ ಆಶಯ ಒಂದೆಡೆ ಆದರೆ
ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಹಾಗೂ ಮೂಲ ಕಾಂಗ್ರೆಸಿಗ ಕಲ್ಲು ಬಂಡೆ ಎಂದೇ ಹೆಸರಾದ ಡಿ ಕೆ ಶಿವಕುಮಾರ್ ಮುಂದಿನ ಮುಖ್ಯ ಮಂತ್ರಿ ಆಗುವ ಕನಸ್ಸು ನನಗೂ ಇದೆ ಎಂದು ಮಾದ್ಯಮದಲ್ಲಿ ಈಗಾಗಲೇ ಪ್ರಸ್ತಾಪಿಸಿದ್ದರು.

             ಆದರೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಆಗಲು ಹೈಕಮಾಂಡ್ ಒಪ್ಪುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯರ ಈ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲ ಸೃಷ್ಟಿಮಾಡಿದೆ.

ಖಾಸಗಿ ಸುದ್ದಿವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಒಪ್ಪುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾನು ಡಿ.ಕೆ. ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು.ಇದು ನನ್ನ ಸಾರ್ವಜನಿಕ ಜೀವನದ ಕೊನೇ ಚುನಾವಣೆ. ಹೀಗಾಗಿ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿಯಾಗಲು ಹೈಕಮಾಂಡ್ ಅವಕಾಶ ನೀಡುವುದಿಲ್ಲ ಎಂದು ಸಂದರ್ಶನದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯನವರ ಈ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಬಿರುಗಾಳಿ ಎಬ್ಬಿಸಿದೆ. ಚುನಾವಣೆ ಹೊತ್ತಲ್ಲಿ ಸಿದ್ದರಾಮಯ್ಯ ಅವರ ಈ ಹೇಳಿಕೆ ಪಕ್ಷದೊಳಗೆ ತಳಮಳ ಸೃಷ್ಟಿಸಿದೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *