
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಭೀಕರ ಅಪಘಾತಕ್ಕೀಡಾಗಿದೆ. ಈ ದುರಂತದಲ್ಲಿ 50 ಮಂದಿ ಸಾವಿಗೀಡಾಗಿದ್ದಾರೆ. ಸುಮಾರು 300ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಮಂದಿ ಗಾಯಗೊಂಡಿದ್ದಾರೆ. ಎರಡು ಪ್ಯಾಸೇಂಜರ್ ಟ್ರೈನ್, ಒಂದು ಗೂಡ್ಸ್ ರೈಲು ನಡುವೆ ಅಪಘಾತ ಆಗಿದೆ. ಈಗ ಅಪಘಾತಕ್ಕೀಡಾದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ಬಿನಿ ವೈಷ್ಣವ್ ಟ್ವೀಟ್ ಮಾಡಿದ್ದು, ಮೃತ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.ದುರಂತದಲ್ಲಿ ಮೃತಪಟ್ಟವರಿಗೆ 10 ಲಕ್ಷ ಪರಿಹಾರ ಘೋಷಿಸಲಾಗಿದೆ. ಹಾಗೆಯೇ ಗಂಭೀರವಾಗಿ ಗಾಯಾಳುಗಳಿಗೆ 2 ಲಕ್ಷ ರೂ., ಸಣ್ಣಪುಟ್ಟ ಗಾಯಾಗೊಂಡವರಿಗೆ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಕೇಂದ್ರ ಖಾತೆ ಸಚಿವ ಅಶ್ಬಿನಿ ವೈಷ್ಣವ್ ಬರೆದುಕೊಂಡಿದ್ದಾರೆ.ಇನ್ನು, ಒಡಿಶಾ ಸಿಎಂ ನವೀನ್ ಪಟ್ನಾಯಕ್ ಕೂಡ ಮೃತ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ. ವೆಸ್ಟ್ ಬೆಂಗಾಲ್ ಸಿಎಂ ಮಮತಾ ಬ್ಯಾನರ್ಜಿ ಮತ್ತು ತಮಿಳುನಾಡು ಸಿಎಂ ಸ್ಟಾಲಿನ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ವೈದ್ಯಕೀಯ ತಂಡಗಳನ್ನು ಕಳಿಸಿ ನೆರವಿಗೆ ಧಾವಿಸಿದ್ದಾರೆ.ಕೇಂದ್ರ ಸರ್ಕಾರವೂ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಎನ್ಡಿಆರ್ಎಫ್ ತಂಡಗಳನ್ನು ಸ್ಥಳಕ್ಕೆ ಕಳಿಸಿದೆ. ಪ್ರಸ್ತುತ ಸ್ಥಳಗದಲ್ಲಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಎಸ್‌ಆರ್‌ಸಿಗೆ ಬೇಕಾದ ಸಹಾಯ ಒಡಿಶಾ ಸರ್ಕಾರ ಮಾಡುತ್ತಿದೆ.


