
ನೆನ್ನೆ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 2-1 ಗೋಲುಗಳ ಅಂತರದಲ್ಲಿ ಸೋಲಿಸುವ ಮೂಲಕ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡ ಜೂನಿಯರ್ ಏಷ್ಯಾಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾರತ ಹಾಕಿ ತಂಡ ನೆನ್ನೆ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 2-1 ಗೋಲುಗಳ ಅಂತರದಲ್ಲಿ ಸೋಲಿಸುವ ಮೂಲಕ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡ ಜೂನಿಯರ್ ಏಷ್ಯಾಕಪ್ ಟೂರ್ನಿ (Junior Men’s Asia Cup Hockey) ಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅಂಗದ್ ಬೀರ್ ಸಿಂಗ್ ಮತ್ತು ಅರೈಜೀತ್ ಸಿಂಗ್ ಹುಂಡಾಲ್ ಅವರ ಗೋಲುಗಳ ನೆರವಿನಿಂದ ಭಾರತ 2-1 ಗೋಲುಗಳಿಂದ ಎದುರಾಳಿ ಪಾಕಿಸ್ತಾನವನ್ನು ಮಣಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಗೆದ್ದ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆ ಕೋರಿದ್ದಾರೆ.ಟ್ವೀಟ್ ಮೂಲಕ ಶುಭ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ಪುರುಷರ ಜೂನಿಯರ್ ಏಷ್ಯಾ ಕಪ್ನಲ್ಲಿ ಅದ್ಭುತ ಗೆಲುವು ಸಾಧಿಸಿದ ನಮ್ಮ ಜೂನಿಯರ್ ಪುರುಷರ ಹಾಕಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಗೆಲುವು ಬೆಳೆಯುತ್ತಿರುವ ಯುವಕರಲ್ಲಿ ಪ್ರತಿಭೆ ಮತ್ತು ದೃಢನಿಶ್ಚಯವನ್ನು ಪ್ರತಿಬಿಂಬಿಸುತ್ತದೆ. ಅವರು ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದಿದ್ದಾರೆ.
