ಕಾಂಗ್ರೆಸ್ ಪಕ್ಷ​ ಅಧಿಕಾರ ಬಂದ ಕೂಡಲೇ ಚುನಾವಣೆಗೂ ಮುನ್ನ ಘೋಷಿಸಿದ್ದ ಶಕ್ತಿ ಯೋಜನೆಯನ್ನು ಜಾರಿಗೆ ತರಲು ಸಕಲ ತಯಾರಿ ಮಾಡಿಕೊಳ್ಳುತ್ತಿದೆ. ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಕಲ್ಪಿಸುವುದು ಈ ಶಕ್ತಿ ಯೋಜನೆಯ ಉದ್ದೇಶವಾಗಿದೆ.ಜೂನ್​ 11ರಂದು ಈ ಯೋಜನೆ ಜಾರಿಗೆ ಬರಲಿದೆ. ಅಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಂದಿನಿಂದ ಮಹಿಳೆಯರು ರಾಜ್ಯದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಸರ್ಕಾರ ಕೆಲವು ಷರತ್ತುಗಳನ್ನು ಹಾಕಿದೆ. ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್‌ಪ್ರೆಸ್ ಬಸ್​ನಲ್ಲಿ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಬಿಎಂಟಿಸಿ ಮತ್ತು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಅವಕಾಶ ಇದೆ. ಎಸಿ ಮತ್ತು ಐಷಾರಾಮಿ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲ. ರಾಜಹಂಸ ಬಸ್​ನಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಇರುವುದಿಲ್ಲ. ಅಂತಾರಾಜ್ಯ ಪ್ರಯಾಣಕ್ಕೆ ಉಚಿತ ಸೌಲಭ್ಯ ಇರುವುದಿಲ್ಲ.ಉಚಿತ ಪ್ರಯಾಣದ ವೇಳೆ ಮಹಿಳೆರಿಗೆ ಟಿಕೆಟ್​ ಕೊಡುತ್ತಾರಾ? ಅಥವಾ ಯಾವುದಾದರೂ ದಾಖಲೆ ತೆಗೆದುಕೊಂಡು ಹೋಗಬೇಕಾ ಎಂಬ ಗೊಂದಲ ಮಹಿಳೆಯರಲ್ಲಿದೆ. ಆದರೆ, ಆ ಗೊಂದಲಕ್ಕೆ ಈಗ ತೆರೆಬಿದ್ದಿದೆ. ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಬಸ್​ನಲ್ಲಿ ಟಿಕೆಟ್ ಪಡೆಯುವ ಗೋಜಿಲ್ಲ ಅಂತ ಮಹಿಳೆಯರು ಅಂದುಕೊಳ್ಳಬೇಡಿ. ಏಕೆಂದರೆ, ಕಂಡಕ್ಟರ್​ ಮಹಿಳೆಯರಿಗೂ ಟಿಕೆಟ್ ಕೊಡುತ್ತಾರೆ.ಯಾವ ರೀತಿ ಇರುತ್ತೆ ಟಿಕೆಟ್?ಯೋಜನೆ ಜಾರಿಗೂ ಮೊದಲು ನಾಲ್ಕು ನಿಗಮಗಳಲ್ಲೂ ಇದಕ್ಕಾಗಿ ಭಾರೀ ತಯಾರಿ ಕೂಡ ನಡೆಯುತ್ತಿದೆ. ಶಕ್ತಿ ಯೋಜನೆಯ ಹೊಸ ಟಿಕೆಟ್ ಈಗ ರಚನೆಯಾಗಿದೆ. ಟಿಕೆಟ್​ ಮೇಲೆ ‘ಮಹಿಳಾ ಪ್ರಯಾಣಿಕರ ಉಚಿತ ಚೀಟಿ ಶಕ್ತಿ ಯೋಜನೆ’ ಎಂದು ಬರೆದಿರುತ್ತಾರೆ ಮತ್ತು ಟಿಕೆಟ್​ನಲ್ಲಿ ಯಾವುದೇ ಬೆಲೆ ನಮೂದಾಗುವುದಿಲ್ಲ. ಮಾಮೂಲಿಯಂತೆ ಕಂಡಕ್ಟರ್​ ಬಳಿ ಟಿಕೆಟ್​ ಪಡೆದುಕೊಳ್ಳಬೇಕು. ಆದರೆ, ಬದಲಾವಣೆ ಏನೆಂದರೆ, ಹಣ ಕೊಡುವಂತಿಲ್ಲ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *