ನಾಡಪ್ರಭು ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ತಾಲೂಕು ಆಡಳಿತದಿಂದ ವಿನಾಕಾರಣ ಅಡ್ಡಿ ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಸ್ಥಳವಕಾಶ ನೀಡುವಂತೆ ಒತ್ತಾಯಿಸಿ ತಾಲೂಕು ಒಕ್ಕಲಿಗರ ಸಂಘದಿಂದ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಸಕಲೇಶಪುರ: ಪಟ್ಟಣದ ಹೊಸಬಸ್ ನಿಲ್ದಾಣದ ಮುಂಬಾಗ ತಾಲೂಕು ಪಂಚಾಯಿತಿಗೆ ಸೇರಿದ ಜಾಗದಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಕೊಡುವಂತೆ ಹಲವಾರು ವರ್ಷಗಳಿಂದ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದು ಆದರೆ ಸದರಿ ಜಾಗದಲ್ಲಿ ಪ್ರತಿಮೆ ನಿರ್ಮಾಣ ಮಾಡಲು ತಾಲೂಕು ಆಡಳಿತ ಅಡ್ಡಗಾಲು ಹಾಕುತ್ತಿರುವುದು. ಖಂಡನೀಯವಾಗಿದೆ ಕೂಡಲೆ ಹೊಸ ಬಸ್‌ನಿಲ್ದಾಣದ ಎದುರಿಗಿನ ಜಾಗವನ್ನು ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರು. ಈ ವೇಳೆ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಚ್.ಎಂ ವಿಶ್ವನಾಥ್ ಅವರು ಮಾತನಾಡಿ ತಾಲೂಕಿನಲ್ಲಿ ಸಾವಿರಾರು ಎಕರೆ ಜಾಗ ಒತ್ತುವರಿ ಆಗಿದ್ದಾವೆ ಆದರೆ ಒಕ್ಕಲಿಗರ ಸಂಘದ ವತಿಯಿಂದ ನಿರ್ಮಾಣ ಮಾಡುತ್ತಿರುವ ಕೆಂಪೇಗೌಡ ಪ್ರತಿಮೆ ನಿರ್ಮಾಣ ಮಾಡುವುದಕ್ಕೆ 5 ಗುಂಟೆ ಜಾಗ ಮಂಜೂರು ಮಾಡುವುದಕ್ಕೆ ಅಡ್ಡಿ ಉಂಟು ಮಾಡುವುದು ಎಷ್ಟು ಸರಿ ಇಂದು ಸಾಂಕೇತಿಕವಾಗಿ ಪ್ರತಿಭಟನೆ ಮಾಡಲಾಗಿದ್ದು ಕೆಂಪೇಗೌಡರ ಜನ್ಮ ಜಯಂತಿಯಂದು ಒಕ್ಕಲಿಗರ ಸಮುದಾಯ ಮತ್ತು ಇತರ ಸಮುದಾಯಗಳು ಒಗ್ಗೂಡಿ ಉಗ್ರ ಪ್ರತಿಭಟನೆಯನ್ನು ಮಾಡಲಾಗುವುದು. ಅಧಿಕಾರಿಗಳು ಪ್ರತಿಮೆ ನಿರ್ಮಾಣಕ್ಕೆ ಅಡಚಣೆ ಉಂಟು ಮಾಡುತ್ತಿದ್ದಾರೆ. ಇದಕ್ಕೆ ಕೆಲ ರಾಜಕೀಯದ ಕಾಣದ ಕೈಗಳು ಇವರ ಕೈಯಿಂದ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಾಣವಾಗಲೇಬೇಕು ಇದಕ್ಕೆ ಯಾವ ಶಕ್ತಿಯೇ ಅಡ್ಡ ಬಂದರು ಒಕ್ಕಲಿಗರ ಸಮುದಾಯ ಸಹಿಸುವುದಿಲ್ಲ ನಾವು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಬಳಿ ಹೋಗಿ ಆಗುತ್ತಿರುವ ಸಮಸ್ಯೆಗಳ ಬಗೆ ಬಗೆಹರಿಸುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಬೈರಮುಡಿ ಚಂದ್ರು, ಜೆಡಿಎಸ್ ಮುಖಂಡರುಗಳಾದ ಸಚ್ಚಿನ್ ಪ್ರಸಾದ್, ಸುಪ್ರದೀಪ್ತ ಯಜಮಾನ್, ಕಾಂಗ್ರೆಸ್ ಮುಖಂಡ ಮುರಳಿ‌ ಮೋಹನ್, ನಂದಿಕೃಪರಾಜು ಸೇರಿದಂತೆ ಇತರ ಗಣ್ಯರು ಪಾಲ್ಗೊಂಡಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *