ಆಲೂರು : ಆಲೂರು ಸ್ಪೋರ್ಟ್ಸ್ ಕ್ಲಬ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಸಂಯುಕ್ತಶ್ರಾಯದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬೈರಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು**ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಎಲ್ಲಿಜಬೆತ್ ಮಾತನಾಡಿ ಈ ದಿನ ಕನ್ನಡಪರ ಹೋರಾಟಗಾರರಾದ ನವೀನ್ ಹಾಗೂ ಅವರ ಪದಾಧಿಕಾರಿಗಳು ಪರಿಸರದ ದಿನಾಚರಣೆ ಅಂಗವಾಗಿ ಪರಿಸರ ಕಾಳಜಿಯಿಂದ ಪರಿಸರದ ಮಹತ್ವವನ್ನು ಹಾಗೂ ಪ್ರತಿಯೊಬ್ಬ ಮಕ್ಕಳಿಗೆ ಪರಿಸರದ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಹೆಚ್ಚು ಗಿಡಗಳನ್ನು ಬೆಳೆಸುವುದರಿಂದ ಪರಿಸರ ಸಮತೋಲನ ಕಾಪಾಡಲು ಹೆಚ್ಚು ಸಸಿಗಳನ್ನು ನೆಡಬೇಕು. ಅವುಗಳನ್ನು ಪಾಲನೆ, ಪೋಷಣೆ ಮಾಡಿ ಗಿಡಗಳಾದ ಮೇಲೆ ಸಂರಕ್ಷಣೆ ಮಾಡಬೇಕು ಹಾಗ ವಾತಾವರಣದಲ್ಲಿ ತಾಪಮಾನ ಪ್ರಮಾಣ ಕಡಿಮೆ ಆಗುತ್ತದೆ. ಆರೋಗ್ಯಯುತ ಜೀವನ ನಡೆಸಲು ಉಪಯುಕ್ತವಾಗುತ್ತದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಎಲ್ಲಾ ಶಾಲಾ ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಯೊಬ್ಬರಿಗೂ ನೇರಳೆ ಗಿಡವನ್ನು ವಿತರಿಸಿದರು. ನಂತರ ಸ್ಪೋರ್ಟ್ಸ್ ಕ್ಲಬ್ ನ ಗೌರವ ಅಧ್ಯಕ್ಷರಾದ ಜವರಪ್ಪನವರು ಮಾತನಾಡಿ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವವನ್ನು ತಿಳಿಸಿದರು. ಮನೆಗೊಂದು ಗಿಡ ಊರಿಗೊಂದು ವನ ಎಂಬ ಗಾದೆಯಂತೆ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಗಿಡ ನೆಡುವುದರ ಮೂಲಕ ಪರಿಸರವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದರು .ಈ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಹಾಗೂ ಕರವೇ ಉಪಾಧ್ಯಕ್ಷ ನವೀನ್ ಬೈರಾಪುರ. ಸ್ಪೋರ್ಟ್ಸ್ ಕ್ಲಬ್ ನ ಗೌರವಾಧ್ಯಕ್ಷರಾದ ಜವರಪ್ಪ. ಶಾಲಾ ಮುಖ್ಯೋಪಾಧ್ಯಾಯಣಿ ಎಲಿಜಬೆತ್. ಶಾಲಾ ಸಿಆರ್‌ಪಿಗಳಾದ ಸುನಿತಾ. ವಿನೋದ್. ಶಾಲಾ ಶಿಕ್ಷಕರಾದ ನಾಗರತ್ನಮ್ಮ.ಜ್ಯೋತಿ. ಶಾಲಾ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *