
ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರ ಕೆಎಸ್ಆರ್ಟಿಸಿ ಬಸ್ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ನಡೆದಿದೆ. ಚಿಕ್ಕಮಗಳೂರು: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರ ಕೆಎಸ್ಆರ್ಟಿಸಿ ಬಸ್ (ksrtc bus) ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ನಡೆದಿದೆ.ಮಾಗುಂಡಿ ಗ್ರಾಮದ ಇರ್ಫಾನ್(29) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಮತ್ತೋರ್ವ ಸವಾರನ ಸ್ಥತಿ ಗಂಭೀರವಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಸ್ಕೂಟಿ ನಿಯಂತ್ರಣ ತಪ್ಪಿದ್ದು, KSRTC ಬಸ್ಸಿನ ಹಿಂಬದಿ ಚಕ್ರಕ್ಕೆ ಸವಾರ ಸಿಲುಕಿದ್ದಾನೆ. ಚಿಕ್ಕಮಗಳೂರು – ದಕ್ಷಿಣಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ ಧರ್ಮಸ್ಥಳದಿಂದ ಹರಪ್ಪನಹಳ್ಳಿಗೆ KSRTC ಬಸ್ ತೆರಳುತ್ತಿದ್ದು, ಈ ವೇಳೆ ಅಪಘಾತ ಸಂಭವಿಸಿದೆ.
