
ವಿಧಾನಸಭೆ ಎದುರಿಸಲು ಜೆಡಿಎಸ್ ಈಗಿನಿಂದಲೇ ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದ್ದು, ಸೋಲಿನ ಸೇಡು ತೀರಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಬೆಂಗಳೂರು: ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಬೆನ್ನಲ್ಲೇ ಮುಂಬರುವ ಚುನಾವಣೆಗಳನ್ನು ಎದುರಿಸಲು ಜೆಡಿಎಸ್ ಈಗಿನಿಂದಲೇ ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದ್ದು, ಸೋಲಿನ ಸೇಡು ತೀರಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್ ಸದ್ದಿಲ್ಲದೇ ಬಿಜೆಪಿ ಜೊತೆ ಮೈತ್ರಿಗೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಬಿಬಿಎಂಪಿ ಮತ್ತು ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯ ಫಲಿತಾಂಶದ ನಂತರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ; ಲೋಕಸಭೆ ಚುನಾವಣೆ ಫಲಿತಾಂಶದ ಮೇಲೆ ರಾಜ್ಯ ಸರ್ಕಾರದ ಭವಿಷ್ಯ ನಿಂತಿದೆ: ಕುಮಾರಸ್ವಾಮಿ 2024 ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಹೋಗಲಿದೆಯೇ ಅಥವಾ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆಯೇ ಎಂದು ನಿರ್ಣಯಿಸಲು ಈಗಲೇ ಸಾಧ್ಯವಿಲ್ಲ ಎಂದು ಜೆಡಿಎಸ್ ನಾಯಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಆದರೆ ಜೆಡಿಎಸ್ನ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದು, ಅವರು ಬಿಜೆಪಿಯ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿರುವ ಸಾಧ್ಯತೆಯಿದೆ ಎಂದು ಕೆಲವು ಬಲ್ಲ ಮೂಲಗಳು ಹೇಳುತ್ತಿವೆ.
