
ಸಕಲೇಶಪುರ : 2022 -23ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪರಿಷ್ಕೃತ ಫಲಿತಾಂಶದಲ್ಲಿ ಪಟ್ಟಣದ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪುನರ್ವ ವಿ 625ಕ್ಕೆ 621 ಅಂಕ ಪಡೆದಿದ್ದಾಳೆ. ಈ ಮೂಲಕ ತಾಲೂಕಿಗೆ ಪ್ರಥಮ ಹಾಗೂ ಜಿಲ್ಲೆಗೆ ನಾಲ್ಕನೇ ಸ್ಥಾನ ಮತ್ತು ರಾಜ್ಯಕ್ಕೆ 5ನೇ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಸುಮಾರು 15 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 12 ಅಂಕಗಳು ಹೆಚ್ಚುವರಿ ಯಾಗಿದ್ದು ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಪ್ರತಿ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶದಂತೆ ಈ ಬಾರಿಯೂ ತಾಲೂಕಿಗೆ ಪ್ರಥಮ ಸ್ಥಾನ ತನ್ನದಾಗಿಸಿ ಕೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಹಾಗೂ ಸಂಸ್ಥೆಯ ಅಧ್ಯಕ್ಷ k.b. ಸುಬ್ರಹ್ಮಣ್ಯ, ಕಾರ್ಯದರ್ಶಿ h. R.ಸುರೇಶ್, ಮತ್ತು ಶಿಕ್ಷಕರುಗಳು ಶಾಲೆಗೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
