ಎಲ್ಲಾ 224 ಶಾಸಕರು ಈ ತಿಂಗಳಾಂತ್ಯದೊಳಗೆ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿಗಳು ಡೆಡ್ ಲೈನ್ ನೀಡಿದ್ದಾರೆ.ಜೂನ್ 30ರೊಳಗೆ ಎಲ್ಲಾ ಶಾಸಕರು ಕಡ್ಡಾಯವಾಗಿ ಆಸ್ತಿ ವಿವರ ಸಲ್ಲಿಸುವಂತೆ ಸರ್ಕಾರದ ಸಿಎಸ್ ಗೆ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಸೂಚನೆ ನೀಡಿದ್ದಾರೆ.ಆದೇಶ ನೀಡಿ 15 ದಿನಗಳು ಕಳೆದರೂ ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಕಳೆದ ಬಾರಿ ಆಸ್ತಿವಿವರ ಸಲ್ಲಿಸಲಾಗಿದೆ ಎಂದು ಸುಮ್ಮನಿರುವಂತಿಲ್ಲ. ಪುನರಾಯ್ಕೆಯಾದ ಶಾಸಕರು ಹಾಗೂ ಹೊಸದಾಗಿ ಶಾಸಕರಾದವರು ಮತ್ತೊಮ್ಮೆ ಆಸ್ತಿ ವಿವರ ಸಲ್ಲಿಸಬೇಕು. ಜೂನ್ 30ರೊಳಗೆ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸದಿದ್ದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *