ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಅರ್ಜಿ ಸಲ್ಲಿಕೆಯನ್ನು ಸುಲಭವಾಗಿಸಲು ಫಲಾನುಭವಿಗಳ ಮನೆ ಬಾಗಿಲಿಗೆ ತೆರಳಿ ಅರ್ಜಿ ಸ್ವೀಕರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಅನುಷ್ಠಾನಕ್ಕಾಗಿ ಕಂದಾಯ ಇಲಾಖೆ ಸಿಬ್ಬಂದಿ ಬಳಸಿಕೊಳ್ಳಲಾಗುತ್ತಿದೆ. ಯೋಜನೆ ಅಡಿಯಲ್ಲಿ 1.30 ಕೋಟಿ ಅರ್ಜಿ ಸಲ್ಲಿಸುವ ನಿರೀಕ್ಷೆಯಿದ್ದು, ಅರ್ಜಿಗಳನ್ನು ಎರಡು ತಿಂಗಳೊಳಗೆ ಸ್ವೀಕರಿಸಿ ವಿಲೇವಾರಿ ಮಾಡಬೇಕಿಗಾಗಿರುವುದರಿಂದ ಫಲಾನುಭವಿಗಳ ಮನೆ ಬಾಗಿಲಿಗೇ ತೆರಳಿ ಅರ್ಜಿ ಸ್ವೀಕರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.ರಾಜ್ಯದಲ್ಲಿನ 898 ನಾಡ ಕಚೇರಿ ಸೇರಿದಂತೆ 7 ಸಾವಿರಕ್ಕೂ ಹೆಚ್ಚಿನ ಸೇವಾ ಸಿಂಧು ಕಚೇರಿ, ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ. ಜೂನ್ 15 ರಿಂದ ಅರ್ಜಿ ಸ್ವೀಕರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *