
ಸಕಲೇಶಪುರ : KSRTC ಬಸ್ಸ್ ನಲ್ಲಿ ಸ್ತ್ರೀಯರಿಗೆ ಉಚಿತ ಪ್ರಯಾಣಕ್ಕೆ ಚಾಲನೆ ನೀಡಿದ ಶಾಸಕರು.ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ 5 ಯೋಜನೆಗಳಲ್ಲಿ ಶಕ್ತಿ ಯೋಜನೆಯಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಉದ್ಘಾಟನಾ ಕಾರ್ಯಕ್ರಮವನ್ನು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜುನಾಥ್ಅವರು ಹೊಸ ಬಸ್ ನಿಲ್ದಾಣದಲ್ಲಿ ಇಂದು KSRTC ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೆಟ್ ಕೊಟ್ಟು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ತಾಂತ್ರಿಕಾ ಶಿಲ್ಪಿ ರಮೇಶ್,ಪ್ರಭಾರಿ ಘಟಕಾ ವ್ಯವಸ್ಥಾಪಕರು ಜಗನ್ನಾಥ್, ಸಂಚಾರ ಅದೀಕ್ಷಕರು ಜೀವಿಜಯ, ನಿಲ್ದಾಣ ಅಧಿಕಾರಿ ಶ್ರೀಧರ, ಗ್ರಾಮಾಂತರ ಠಾಣಾ ಸಬ್ ಇನ್ಸ್ ಪೆಕ್ಟರ್ ಬಸವರಾಜು ಹಾಗೂ ಇತರ ಸಿಬ್ಬಂದಿಗಳು ಇದ್ದರು.





