ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಸ್ಪಷ್ಟಣೆ ನೀಡಿದ ಹೆಚ್‌ಡಿಕೆ.. 2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಚುನಾವಣೆ ಎದುರಿಸುತ್ತವೆ ಎನ್ನುವ ಮಾತುಗಳು ರಾಜ್ಯದಲ್ಲಿ ಸದ್ದು ಮಾಡಿತ್ತು. ಈ ಮಾತಿಗೆ ಪ್ರತಿಕ್ರಿಯೇ ನೀಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಅವರು ಇದು ಗಾಳಿಸುದ್ದಿ ಎಂದು ಹೇಳುವ ಮೂಲಕ ಮೈತ್ರಿಯನ್ನು ಅಲ್ಲಗಳೆದಿದ್ದಾರೆ.ಚನ್ನಪಟ್ಟಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ”ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.”ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ, ಈ ವಿಚಾರವನ್ನು ನನ್ನ ಜೊತೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ನಡೆಸಿ, ಗೆದ್ದ ಸೋತ ಅಭ್ಯರ್ಥಿಗಳ ಜತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡುತ್ತಿದ್ದೇವೆ” ಎಂದು ಹೇಳಿದರು.ಮಾಧ್ಯಮದವರು, ನೀವು ರಾಷ್ಟ್ರ ರಾಜಕಾರಣದ ಬಗ್ಗೆ ಒಲವು ವಿಚಾರ ಹೊಂದಿದ್ದೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ”ನನಗೆ ರಾಷ್ಟ್ರ ರಾಜಕಾರಣದ ಮೇಲೆ ಒಲವಿಲ್ಲ. ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ.ಇದೇ ವೇಳೆ ಡಿಕೆ ಸುರೇಶ್ ವಿರುದ್ಧ ಹರಿಹಾಯ್ದ ಅವರು, ”ನಂದುಬಿಡಿ, ಹಾಲಿ ಸಂಸದರ ಕಥೆಯೇ ಕೇಳಿ.. ಅವರನ್ನು ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂತವರೇ ಚುನಾವಣೆ ಬೇಡ ಅಂತ ಹೇಳ್ತಿರುವಾಗ ನಮ್ದೆಲ್ಲ ಯಾವ ಲೆಕ್ಕ?”ಹೆಚ್‌ಡಿಕೆ ಟಾಂಗ್ ಕೊಟ್ಟರು.**ಗ್ಯಾರಂಟಿಗಳ ಗೊಂದಲವಿದೆ** ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾಂಟಿಗಳ ಜಾರಿಗೆ ಮುಂದಾಗಿದ್ದು, ಭಾನುವಾರ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಈ ವಿಚಾರದ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಲು ಇನ್ನೂ ಸಮಯ ಇದೆ. ಕೊಟ್ಟ ಮಾತನ್ನು ಉಳಿಸಿಕೊಳ್ತಿವಿ ಅಂತಿದ್ದಾರೆ. ಅದರೆ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಹೇಗೆ ತಲುಪಿಸುತ್ತಾರೆ ಅನ್ನೋದು ಮುಖ್ಯ. ಈಗಾಗಲೇ ಬಾಡಿಗೆದಾರರಿಗೆ ಉಚಿತ ವಿದ್ಯುತ್ ಇಲ್ಲ ಅಂತಿದ್ದರು. ಆಮೇಲೆ ಕೊಡ್ತೀವಿ ಅಂದ್ರು, ಈಗ ಮನೆ ಮಾಲೀಕರು ಬಾಡಿಗೆದಾರರ ಜತೆ ಅಗ್ರಿಮೆಂಟ್ ಮಾಡಿಕೊಳ್ಳುತ್ತಿಲ್ಲ. ನಾನಾ ಸಮಸ್ಯೆಗಳು ಉದ್ಭವ ಆಗ್ತಿವೆ. ಘೋಷಣೆ ಮಾಡಿದಾಗ ನನಗೂ ಫ್ರೀ, ನಿನಗೂ ಫ್ರೀ ಅಂದರು. ಈಗ ಅದನ್ನೆಲ್ಲ ಯಾವರೀತಿ ನಿಬಾಯಿಸುತ್ತಾರೆ ನೋಡಬೇಕು” ಎಂದರು.ಈ ವೇಳೆ ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿದ್ದರ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಇದೀಗ ನಿಮ್ಮದೇ ಸರ್ಕಾರ ಇದೆ, 40% ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸವಾಲು ಹಾಕಿದರು.ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿರುವ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ”ಹಿಂದೆ ಇದೇ ಜನ ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ್ದರು. ಆ ಆರೋಪವನ್ನು ಅವರು ಸಾಬೀತು ಮಾಡಿದ್ದರಾ? ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರಾ? ಈಗ ನೋಡಿದರೆ ನನಗೆ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ” ಎಂದು ಡಿಕೆಶಿ ವಿರುದ್ಧ ಕಿಡಿಕಾರಿದರು.ಈಗ ಕಾಂಗ್ರೆಸ್‌ನವರದ್ದೇ ಸರ್ಕಾರ ಇದೆ. 40% ವಿಚಾರವನ್ನು ತನಿಖೆ ಮಾಡಿಸಲಿ, ಸತ್ಯ ಜನರ ಮುಂದೆ ಇಡಲಿ. ಆರೋಪ ಮಾಡಿದವರ ಬಳಿ ಸಾಕ್ಷ್ಯ ಇರಲೇಬೇಕಲ್ಲವೇ? ಗುತ್ತಿಗೆದಾರರ ಸಂಘದವರು ದೂರು ಕೊಟ್ಟಿದ್ದಾರಲ್ಲ, ಅವರು ಸಾಕ್ಷಿ ಇಟ್ಟಿದ್ರಾ.? ಲೋಕಾಯುಕ್ತಕ್ಕೆ ದೂರು ನೀಡಲು ಅಡ್ಡಿ ಮಾಡಿದ್ದವರು ಯಾರು?” ಎಂದು ಅವರು ಪ್ರಶ್ನಿಸಿದರು.ಕಳೆದ ಮೇ 8ರಂದು ಮಹಾನಗರ ಪಾಲಿಕೆಯಲ್ಲಿ 675 ಕೋಟಿ LOC ಹಣವನ್ನ ಯಾಕೆ ರಿಲೀಸ್ ಮಾಡಿಲ್ಲ? ಅದನ್ನು ಯಾಕೆ ಇಟ್ಟುಕೊಂಡಿದ್ದೀರಿ? ಅದರ ಬಗ್ಗೆ ನೀವು ಮೊದಲು ಜನತೆಗೆ ಹೇಳಿ” ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *