ಸಕಲೇಶಪುರ : ಪಟ್ಟಣದ ಬಾಗೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಇಂದು ಕರ್ನಾಟಕ ಸರ್ಕಾರ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ,ಜಿಲ್ಲಾ ಪಂಚಾಯತಿ ಹಾಸನ, ತಾಲ್ಲೂಕು ಪಂಚಾಯಿತಿ, ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಮಾಹಿತಿ ಶಿಕ್ಷಣ ಮತ್ತು ಸಂವಹನ ದಡಿ ಐ ಈ ಸಿ ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ಕೆ ಹೆಚ್ ಪಿ ಟಿ ಅಡಿಯಲ್ಲಿ ಆರೋಗ್ಯ ಅಮೃತ ಅಭಿಯಾನದಡಿ ನರೇಗಾ ಕೂಲಿಕಾರರಿಗೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಯಿತು.ಬೆಳಗೋಡು ಪ್ರಾಥಮಿಕ ವೈದ್ಯಾಧಿಕಾರಿಗಳಾದ ಡಾ ” ಸವಿತಾ ಅವರು ಮಾತನಾಡಿ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಜಾಗೃತಿ ವಹಿಸಬೇಕು ಇತ್ತೀಚಿನ ದಿನಗಳಲ್ಲಿ 30 ರಿಂದ 40 ವಯಸ್ಸಿನ ಯುವಕರೇ ಹೃದಯಘಾತದಿಂದ ಮರಣ ಹೊಂದುತ್ತಿದ್ದಾರೆ.ಹಾಗಾಗಿ ಪ್ರತಿಯೊಬ್ಬ ಸಾರ್ವಜನಿಕರು ಆರೋಗ್ಯದ ಬಗ್ಗೆ ಜಾಗತಿವೈಸ ಬೇಕು ಎಂದು ತಿಳಿಸಿದರು .ಈ ವೇಳೆಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಡಾ. ಸವಿತಾ ಅವರಿಗೆ ಸನ್ಮಾನಿಸಲಾಯಿತು.ಗ್ರಾಮ ಪಂಚಾಯತಿ ಅಧ್ಯಕ್ಷರಾದ ಜೈ ಶಂಕರ ಅವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಅವರ ವೈಯಕ್ತಿಕ ಒತ್ತಡಗಳಿಂದ ಆರೋಗ್ಯದ ಮೇಲೆ ಕಾಳಜಿ ಇಟ್ಟುಕೊಳ್ಳದಿರುವುದು ಹೆಚ್ಚಾಗಿದೆ.ಆದಷ್ಟು ಪ್ರತಿಯೊಬ್ಬರು ತಮ್ಮ ಆರೋಗ್ಯದ ಮೇಲೆ ನಿಗಾ ಇಡಬೇಕು ಎಂದು ತಿಳಿಸಿದರು.ಸುಮಾರು ಮಧ್ಯಾಹ್ನ 2 ಗಂಟೆಯ ಹೊತ್ತಿಗೆ 60 ಜನಗಳ ಆರೋಗ್ಯ ತಪಾಸಣೆ ನಡೆಯಿತು.ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಚಿನ್ನಸ್ವಾಮಿ, ಉಪಾಧ್ಯಕ್ಷ ಸವಿತಾ ,ಸದಸ್ಯರುಗಳಾದ ಚಾರ್ಲ್ಸ್, ಸತೀಶ್, ಶ್ರೀನಿವಾಸ್, ರಾಕೇಶ್ ,ಆರೋಗ್ಯ ಕಿರಿಯ ಸಹಾಯಕಿ ಮೊಮಿನ, ಆನಂದ್, ಶಶಿಧರ್ , ಹಾಗೂ ಪಂಚಾಯತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed