ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಯಾದ ಗೃಹಲಕ್ಷ್ಮಿ ಯೋಜನೆಗೆ ಅರ್ಹ ಫಲಾನುಭವಿಗಳು ನಾಳೆಯಿಂದ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‍ಗಳ ಪೈಕಿ ಯಾವುದಾದರೂ ಒಂದು ಕಾರ್ಡ್ ಹೊಂದಿರುವ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಹ ಪಲಾನುಭವಿಗಳಿಗೆ ಮಾಸಿಕ 2 ಸಾವಿರ ನೀಡುವ ಯೋಜನೆಗೆ ಸೇವಾಸಿಂಧು, ಪೆÇೀರ್ಟ್‍ಲ್ , ಆನ್‍ಲೈನ್ ಮತ್ತು ಭೌತಿಕವಾಗಿ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.ಭೌತಿಕವಾಗಿ ಅರ್ಜಿ ಸಲ್ಲಿಸುವ ಮಹಿಳೆಯರು ತಮ್ಮ ಬಿಪಿಎಲ್ ಕಾರ್ಡ್ ನೊಂದಿಗೆ ಆಧಾರ್ ಲಿಂಕ್ ಆಗಿರುವ ಮೊಬೈಲ್ ನಂಬರ್ ನೀಡಬೇಕು. ನಾಳೆ ಮಧ್ಯಾಹ್ನ 1.30ಕ್ಕೆ ನಗರದ ಶಕ್ತಿ ಭವನದಲ್ಲಿ ಮುಖ್ಯ ಮಂತ್ರಿಗಳು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಗೃಹಲಕ್ಷ್ಮೀ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಅರ್ಜಿ ಸಲ್ಲಿಕೆಗೆ ಯಾವುದೆ ಶುಲ್ಕವಿರುವುದಿಲ್ಲ. ಜೊತೆಗೆ ಕೊನೆ ದಿನಾಂಕವಿಲ್ಲ, ಮಧ್ಯವರ್ತಿಗಳ ಅವಶ್ಯಕತೆ ಇರುವುದಿಲ್ಲ ಎಂದರು.ಅರ್ಜಿ ಸಲ್ಲಿಕೆಯಾದ ನಂತರ ಎಸ್‍ಎಂಎಸ್ ಬರಲಿದ್ದು, ಸೇವಾ ಸಿಂಧು ಮೂಲಕ ಸ್ವೀಕೃತಿ ಪತ್ರ ಪಡೆಯಬಹುದಾಗಿದೆ. ಅರ್ಜಿ ಪರಿಶೀಲನೆ ನಂತರ ಅರ್ಹ ಫಲಾನುಭವಿಗಳ ಖಾತೆಗೆ ಎರಡು ಸಾವಿರ ನಗದು ನೇರವಾಗಿ ವರ್ಗಾವಣೆಯಾಗಲಿದೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed