ಹಾಸನ : ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಚತಾ ಟೆಂಡರ್ ಬಿಲ್ ನೀಡಲು ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಹಾಸನ ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಾಸನ ನಗರಸಭೆ ಆಯುಕ್ತ ನರಸಿಂಹಮೂರ್ತಿ, ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಕೆ.ಆರ್.ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಚತಾ ಟೆಂಡರ್ ಬಿಲ್ 10.50 ಲಕ್ಷ ರೂ. ಬಿಡುಗಡೆ ಮಾಡಲು ಒಂದೂವರೆ ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಮೊದಲೆ ಹೆಣೆದಿದ್ದ ಬಲೆಯಂತೆ ಅಧಿಕಾರಿಗಳು ಇಂದು ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಇನ್ಸ್ ಪೆಕ್ಟರ್ಗಳಾದ ಬಾಲು ಹಾಗೂ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರನ್ನೂ ಲಂಚದ ಹಣದ ಸಮೇತ ವಶಕ್ಕೆ ಪಡೆಯಲಾಯಿತು.

ರಾಜ್ಯದಲ್ಲಿ ಕಮಿಷನ್ ದಂಧೆ ಹೆಚ್ಚಾಗುತ್ತಿದೆ ಎಂಬ ಕುಮಾರಸ್ವಾಮಿ ಆರೋಪ ಮಾಡಿದ ಬೆನ್ನಲ್ಲಿಯೇ ಹಾಸನದಲ್ಲಿ ಸರ್ಕಾರಿ ಅಧಿಕಾರಿಗಳು ಲಂಚದ ಮೊರೆ ಹೋಗುವ ದುಸ್ಸಾಹಸಕ್ಕೆ ಕೈ ಹಾಕುತ್ತಿದ್ದು, ಸರ್ಕಾರ ಒತ್ತಡ ಅಧಿಕಾರಿಗಳಿಗೆ ಇದ್ಯಾ ಎಂಬ ಅನುಮಾನ ಮೂಡುತ್ತಿದೆ. ಮೊನ್ನೆ ಮೊನ್ನೆ ತಾನೆ ಶಿಕ್ಷಣ ಇಲಾಖೆಯ ಡಿಡಿಪಿಐ ಮತ್ತು ಮೇಲ್ವಿಚಾರಕ ಲೋಕ ಬಲೆ ಗೆ ಬಿದ್ದ ಬೆನ್ನಲಿಯೇ ಈಗ ನಗರಸಭೆಯ ಮುಖ್ಯಾಧಿಕಾರಿ ಮತ್ತು ಪರಿಸರಿ ಅಭಿಯಂತರರು ಲೋಕ ಬಲೆಗೆ ಬಿದ್ದಿರೋದು ಕಮಿಷನ್ ದಂಧೆಗೆ ಸಾಕ್ಷಿಯಾಗಿದೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed