
ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ಗಾಯಗೊಂಡಿದ್ದಾರೆ. ಗುರುವಾರ ತಡರಾತ್ರಿ 2:30 ರ ಸುಮಾರಿಗೆ ನಟ ತಮ್ಮ ಇತರ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ.
ಬಳಿಕ ಕೂಡಲೇ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಬಾಂದ್ರಾ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
