ಬೇಲೂರು : ಆನ್‌ಲೈನ್ ಗೇಮ್ ನಿಂದ ಹಣ ಕಳೆದುಕೊಂಡು ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಲೂರು ಪಟ್ಟಣದ ಬಸ್ ನಿಲ್ದಾಣ ಬಳಿ ಇರುವ ಪುಷ್ಪಗಿರಿ ಲಾಡ್ಜ್ ನಲ್ಲಿ ನಡೆದಿದೆ.23 ವರ್ಷದ ರಾಕೇಶ್ ಗೌಡ ಎಂಬ ಯುವಕ ನೇಣಿಗೆ ಶರಣಾಗಿದ್ದಾನೆ.

ಮೃತ ರಾಕೇಶ್ ಗೌಡ ತಾಲ್ಲೂಕಿನ ಚೋಕನಹಳ್ಳಿ ಗ್ರಾಮದವನಾಗಿದ್ದು, ಇವನು ಟಾಟ ಕ್ಯಾಪಿಟಲ್‌ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಹಲವಾರು ತಿಂಗಳಿಂದ ಆನ್‌ಲೈನ್ ಗೇಮ್ ನಲ್ಲಿ ರಾಕೇಶ್ ಗೌಡ ಮಗ್ನನಾಗಿದ್ದ. ರಮ್ಮಿ ಆನ್‌ಲೈನ್ ಗೇಮ್ ನಲ್ಲಿ ಆಟವಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ.ನಿನ್ನೆ ಮದ್ಯಹ್ನ 2 ಗಂಟೆ ಸುಮಾರಿಗೆ ಚೋಕನಹಳ್ಳಿ ಯಿಂದ ಬೇಲೂರು ಪುಷ್ಪಗಿರಿ ಲಾಡ್ಜ್ ಗೆ ಬಂದಿದ್ದಾನೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನ ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *