ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಈವರೆಗೆ ಪ್ರಾರ್ಥನೆಯ ವೇಳೆ ನಾಡಗೀತೆ ಮತ್ತು ರಾಷ್ಟ್ರಗೀತೆಯನ್ನು ಹಾಡಲು ಅವಕಾಶವಿತ್ತು. ಈಗ ಈ ಎರಡೂ ಗೀತೆಯೊಂದಿಗೆ ಸಂವಿಧಾನ ಪೀಠಿಕೆ ಓದುವುನ್ನೂ ಕಡ್ಡಾಯಗೊಳಿಸಲು ಕಾಂಗ್ರೆಸ್‌ ಸರ್ಕಾರ ತೀರ್ಮಾನಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಇಲಾಖೆಗಳ ಸಚುವರೂ ಭಾಗವಹಿಸಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರ ತೆಗೆದುಕೊಂಡಿದ್ದ ಬಹುತೇಕ ವಿವಾದಿತ ಕಾಯ್ದೆಗಳನ್ನು ಕಾಂಗ್ರೆಸ್‌ ಈಗ ರದ್ದುಗೊಳಿಸಲು ಮುಂದಾಗಿದೆ. ಈ ಪೈಕಿ ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಕಾರ್ಯಕ್ಕೂ ಕೈಹಾಕಿದೆ. ಮುಖ್ಯವಾಗಿ ಬಿಜೆಪಿ ಸರ್ಕಾರದಿಂದ ಸೇರ್ಪಡೆ ಮಾಡಲಾಗಿಉದ್ದ ಪಠ್ಯಗಳನ್ನು ತೆಗೆದುಹಾಕಲು ಮುಂದಾಗಿದೆ. ಜೊತೆಗೆ, ಪರಿಷ್ಕರಣೆಗೂ ಮುನ್ನ ಪಠ್ಯಪುಸ್ತಕದಿಂದ ಕೈಬಿಡಲಾಗಿದ್ದ ಪಠ್ಯವನ್ನು ಸೇರ್ಪಡೆ ಮಾಡಲು ನಿರ್ಧರಿಸಲಾಗಿದೆ. ಸಂವಿಧಾನ ಪೀಠಿಕೆ ಓದು ಕಡ್ಡಾಯ: ಇನ್ನುಮುಂದೆ ರಾಜ್ಯದ ಎಲ್ಲ ಸರ್ಕಾರಿ, ಸರ್ಕಾರಿ ಅನುದಾನಿತ ಹಾಘೂ ಸರ್ಕಾರದ ಒಪ್ಪಿಗೆ ಪಡೆದು ಸ್ಥಾಪಿಸಲಾದ ಎಲ್ಲ ಖಾಸಗಿ ಶಾಲೆಗಳಲ್ಲಿಯೂ ಸಂವಿಧಾನ ಪೀಠಿಕೆ ಓದನ್ನು ಕಡ್ಡಾಯಗೊಳಿಸಲು ಮುಂದಾಗಿದೆ. ಈವರೆಗೆ ಎಲ್ಲ ಶಾಲಾ-ಕಾಲೇಜುಗಳಲ್ಲಿ ಪ್ರತಿನಿತ್ಯ ಪ್ರಾರ್ಥನಾ ಸಮಯದಲ್ಲಿ ಹಾಗೂ ರಾಷ್ಟ್ರೀಯ ಹಬ್ಬಗಳಲ್ಲಿ ನಾಡಗೀತೆ, ರಾಷ್ಟ್ರಗೀತೆಗಳನ್ನು ಹಾಡಲಾಗುತ್ತಿತ್ತು. ಈಗ ಅದರೊಂದಿಗೆ ಭಾರತೀಯ ಸಂವಿಧಾನದ ಪೀಠಿಕೆ ಓದುವುದನ್ನು ಕೂಡ ಕಡ್ಡಾಯಗೊಳಿಸಲಿ ರಾಜ್ಯ ಸರ್ಕಾದರ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *