ಆಲೂರು : ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆ.ಹೊಸಕೋಟೆ ಹೋಬಳಿ ಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ.
ಧನಶ್ರೀ (20) ಮೃತ ಮಹಿಳೆ. ಸಕಲೇಶಪುರ ಬ್ಯಾಕೆರೆಗಡಿ ಗ್ರಾಮದವರು. ಧನಶ್ರೀ ಎರಡು ವರ್ಷಗಳ ಹಿಂದೆ ಪ್ರೇಮ್ ಕುಮಾರ್ ಎಂಬಾತನ ಜೊತೆ ವಿವಾಹವಾಗಿದ್ದರು.
ವರದಕ್ಷಿಣೆ ಕಿರುಕುಳದಿಂದ ತೀವ್ರವಾಗಿ ನೊಂದ ಧನ್ಯಶ್ರೀ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತಳ ಗಂಡ ಪ್ರೇಮಕುಮಾರ್ ಬಾವ ಪ್ರದೀಪ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಮುಂದುವರಿಸಿದ್ದಾರೆ