ಅರಕಲಗೂಡು: ಜಮೀನಿನ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳ ತಾರಕ ಕೇರಿದ್ದು ಈ ವೇಳೆ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪಟ್ಟಣದ ಕೋಟೆಯಲ್ಲಿ ನಡೆದಿದೆ.
ವಿಷ ಸೇವಿಸಿದ ದಿವ್ಯ(೨೫) ಸುಮಂತ್(೩೦) ಶಿವಮ್ಮ(೫೫) ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಿವ್ಯಾ ಸ್ಥಿತಿ ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ.
ಶಿವಮ್ಮ ಮತ್ತು ಸುಮಂತ್ ರವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.