
ಆಲೂರು : ತಾಲೂಕಿನ ಕಾರ್ಜುವಳ್ಳಿ ಹಿರೇಮಠದಲ್ಲಿ ಜೂನ್ ೧೭ ರಂದು ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಾಸಿಂಹಾಸನದ ಪೀಠಾಧ್ಯಕ್ಷರಾದ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಸಂಕಲ್ಪ ಶಕ್ತಿ ಸಮಾರಂಭ ಜರುಗಲಿದ್ದು ಮಠದ ಸಧ್ಭಕ್ತರು ಸಕಾಲಕ್ಕೆ ಆಗಮಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಶ್ರೀ ಸಂಸ್ಥಾನ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ.ಷ.ಬ್ರ ಸದಾಶಿವ ಶಿವಾಚಾರ್ಯ ಮಹಾಸ್ವಾಮಿಜಿಗಳು ಪತ್ರಿಕಾ ಪ್ರಕಣೆಯಲ್ಲಿ ತಿಳಿಸಿದ್ದಾರೆ.ಜೂನ್ ೧೭ ಕಾರ್ಜುವಳ್ಳಿ ಮಠದ ಆವರಣದಲ್ಲಿ ಬೆಳಿಗ್ಗೆ ೮ ಗಂಟೆಗೆ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ದಿವ್ಯ ಸಾನ್ನಿಧ್ಯದಲ್ಲಿ ಲೋಕಕಲ್ಯಾಣಾರ್ಥವಾಗಿ, ಪ್ರದೇಶಾಭಿವೃದ್ಧಿಗಾಗಿ ಹಾಗೂ ಸುವೃಷ್ಟಿ ಪ್ರಾಪ್ತಿಗಾಗಿ, ವಿಶ್ವಶಾಂತಿಗಾಗಿ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ ಹಾಗೂ ಮದ್ಯಾಹ್ನ ೧೨ ಗಂಟೆಗೆ ಮನೆ-ಮನೆಗೆ ರೇಣುಕ, ಮನ-ಮನಕೆ ರೇಣುಕ ಸಿದ್ಧಾಂತ ಶಿಖಾಮಣಿ ತತ್ತ್ವ ಪ್ರಚಾರ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಕಾರ್ಯಕಾರಿಣಿ ಘಟಕದ ಸದಸ್ಯ ಸಿದ್ಧೇಶ ನಾಗೇಂದ್ರ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಆಲೂರು-ಸಕಲೇಶಪುರ ಕ್ಷೆತ್ರದ ಶಾಸಕ ಸಿಮೇಂಟ್ ಮಂಜು, ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕಾಂತರಾಜು ಎಮ್.ಡಿ.. ದೊಡ್ಡಬೆಮ್ಮತ್ತಿಯ ಎಮ್.ಎಮ್.ಸುರೇಶ್, ಕಡೇನಂದಿಹಳ್ಳಿ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಸಮ್ಮುಖ ವಹಿಸುವರು. ಹಾರನಹಳ್ಳಿ ಶಿವಯೋಗಿ ಶಿವಾಚಾರ್ಯ ಸ್ವಾಮಿಗಳು, ಸಂಕಲಾಪುರಮಠದ ಧರ್ಮರಾಜೇಂದ್ರ ಸ್ವಾಮಿಗಳು, ಎಸಳೂರು ಚನ್ನಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡುವರು. ಲೋಕಕಲ್ಯಾಣಾರ್ಥವಾಗಿ ನಡೆಯುವ ಈ ಎಲ್ಲ ಕಾರ್ಯಕ್ರಮಗಳಲ್ಲಿ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲೊಳ್ಳುವಂತೆ ಶ್ರೀ ಮಠದಿಂದ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ ಎಂದರು.ಪೋಟೋ ಕ್ಯಾಪ್ಷನ್ ಜೂ.೧೫ ಎ ಎಲ್ ಆರ್ ಪಿ ೧ಶ್ರೀ ಸಂಸ್ಥಾನ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ.ಷ.ಬ್ರ ಸದಾಶಿವ ಶಿವಾಚಾರ್ಯ ಮಹಾಸ್ವಾಮಿಜಿಗಳು
