ಬೇಲೂರು : ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆಯರ ಮೇಲೆ ಕಾಡಾನೆ ದಾಳಿ ಮಾಡಿದ್ದು ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ , ಬೇಲೂರು ತಾಲ್ಲೂಕಿನ, ಬಿಕ್ಕೋಡು ಗ್ರಾಮದಲ್ಲಿ ಘಟನೆ. ಗೀತಾ (40), ಹೇಮ (38) ಗಾಯಗೊಂಡ ಮಹಿಳೆಯರು.

ಇಂದು ಬೆಳಿಗ್ಗೆ ಬಿಕ್ಕೋಡು ಕಾಫಿ ಎಸ್ಟೇಟ್‌ಗೆ ಕೆಲಸಕ್ಕೆ ಮಹಿಳೆಯರುತೆರಳುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಇಬ್ಬರು ಮಹಿಳೆಯರನ್ನು ಸೊಂಡಲಿನಿಂದ ಎತ್ತಿ ಬಿಸಾಡಿ ಕಾಲಿನಿಂದ ತುಳಿದಿದೆ. ಗೀತಾ ಹೊಟ್ಟೆ, ತಲೆ ಭಾಗ ಮತ್ತು ಹೇಮ ಅವರ ಮುಖ, ಬಲ ಕೈಗೆ ಗಾಯಗಳಾಗಿದ್ದು, ಗಾಯಾಳುಗಳಿಗೆ ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಆಸ್ಪತ್ರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಕಾಡಾನೆ ಹಾವಳಿಯಿಂದ ಬೇಲೂರು ಭಾಗದ ರೈತರು ಹಾಗೂ ಕಾಫಿ ಬೆಳೆಗಾರರು ಕಾಡಾನೆ ಹಾವಳಿಯಿಂದ ಹೈರಾಣಾಗಿದ್ದು ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯದ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *