
ಸಕಲೇಶಪುರ : ಬುಧವಾರ ತಾಲೂಕಿನ ಬಾಗೆ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆಯ ಅನುದಾನ ಹಾಗೂ ಲೋಕೋಪಯೋಗಿ ಇಲಾಖೆಯ ನಿರ್ವಹಣೆಯಲ್ಲಿ ಸುಸಜ್ಜಿತ ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಸಿಮೆಂಟ್ ಮಂಜುನಾಥ್ ರೈತರು ಹಾಗೂ ಬೆಳೆಗಾರರಿಗೆ ತೋಟಗಾರಿಕೆ ಇಲಾಖೆಯಿಂದ ದೊರಕುವ ಸೌಲಭ್ಯಗಳು ಪ್ರಾಮಾಣಿಕವಾಗಿ ಸಿಗಬೇಕು ಎಂದು ಹೇಳಿದರು.
ಈ ಸಂಧರ್ಭದಲ್ಲಿ ಬಾಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಗೋಪಿನಾಥ್,ಹಿರಿಯ ಸಹಾಯಕ ತೋಟಗಾರಿಕೆ ಇಲಾಖೆ ನಿರ್ದೇಶಕಿ ಹರ್ಶಿಯ, ಸಹಾಯಕ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ತೇಜ್ ಕುಮಾರ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮುರುಗೇಶ್, ಸಹಾಯಕ ಅಭಿಯಂತರ ಸಲ್ಮಾ ಶಿರೂರು,ಗ್ರಾಪಂ ಸದಸ್ಯರಾದ ಚಾರ್ಲ್ಸ್, ಸತೀಶ್,ಸವಿತ,ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್ ಬಿಜೆಪಿ ತಾಲೂಕು ಉಪಾಧ್ಯಕ್ಷ ವೈ.ಡಿ ಬಸವಣ್ಣ,ಮುಖಂಡರಾದ ಗೋಪಿನಾಥ್, ಪಿಡಿಓ ಚಿನ್ನಸ್ವಾಮಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.


