ಸಕಲೇಶಪುರ :- ತಾಲೂಕಿನ ಯಸಳೂರು ಹೋಬಳಿಯ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹೊಸಕೋಟೆ ಬೆಟ್ಟ ಆರಾಧನ ಎಸ್ಟೇಟ್ ಪಕ್ಕದಲ್ಲಿರುವ ರೋಡಿಕ್ ಕಾಪಿ ಎಸ್ಟೇಟ್‌ನವರಿಗೆ ಅಲಂಕಾರಿಕ ಶಿಲಾ ಗಣಿಗಾರಿಕೆ ನಡೆಸಲು ಈಗಾಗಲೇ ಸರ್ಕಾರ ಅನುಮತಿ ನೀಡಿದ್ದು, ಇದರಿಂದ ಇಲ್ಲಿನ ಜನತೆ ಮತ್ತು ಈ ಭಾಗದಲ್ಲಿ ವಾಸಿಸುವ ಕಾಡು ಪ್ರಾಣಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಪ್ರತಿನಿತ್ಯ ಗ್ರಾನೈಟ್ ಕಲ್ಲು ತುಂಬಿದ ದೊಡ್ಡ ಲಾರಿಗಳು ರಸ್ತೆಯಲ್ಲಿ ಚಲಿಸುವುದರಿಂದ ಸಮಸ್ಯೆಯಾಗುತ್ತಿದೆ.ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ತಾಲ್ಲೂಕು ಸಂಚಾಲರಾದ ಬಿ ಆರ್ ಶಿವಕುಮಾರ್ ಆರೋಪಿಸಿದ್ದಾರೆ .

ನೆನ್ನೆ ರಾತ್ರಿ ಗ್ರಾನೈಟ್ ಕಲ್ಲು ತುಂಬಿದ ಲಾರಿ ರಸ್ತೆ ಮಧ್ಯ ಪಲ್ಟಿ ಆಗಿದ್ದು ಸ್ವಲ್ಪದರಲ್ಲಿ ಅನಾಹುತ ತಪ್ಪಿದೆ.ಅಲ್ಲದೆ ಇದರಿಂದ ಬೆಳಗ್ಗೆಯಿಂದ ಈ ರಸ್ತೆಯಲ್ಲಿ ವಾಹನಗಳು ಚಲಿಸದಂತೆ ಸಮಸ್ಯೆ ಎದುರಾಗಿದೆ. ಈಗಾಗಲೇ ಇಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ, ಇದನ್ನು ನಿಲ್ಲಿಸಬೇಕೆಂದು ತಾಲೂಕು ದಂಡಾಧಿಕಾರಿಗಳ ಕಚೇರಿ ಮುಂದೆ ಸ್ಥಳೀಯ ಗ್ರಾಮಸ್ಥರಿಂದ ಪ್ರತಿಭಟನೆ ನೆಡೆಸಲಾಗಿತ್ತು.ಹಾಗೂ ಜಿಲ್ಲಾಧಿಕಾರಿಗಳಿಗೂ ಅಕ್ರಮ ಗಣಿಗಾರಿಕೆಯ ನಿಲ್ಲಿಸುವಂತೆ ಮನವಿ ಪತ್ರ ಕೊಟ್ಟು ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದರೂ ಕೂಡ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಂಡಿಲ್ಲ

ಈಗ ಈ ತರದ ಅನಾಹುತಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಕೂಡಲೆ ಗಾಣಿಗರಿಕೆ ನಿಲ್ಲಿಸಬೇಕು ಇಲ್ಲವಾದರೆ ಮುಂದಿನ ದಿನದಲ್ಲಿ ಜಿಲ್ಲಾ ಕಛೇರಿಯ ಮುಂದೆ ದೊಡ್ಡಮಟ್ಟದ ಪ್ರತಿಭಟನೆ ಮಾಡಬೇಕಾಗುತ್ತದೆ .ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಮಾಜಿ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಪುಟ್ಟಸ್ವಾಮಿ ಗೌಡ , ಸುರೇಶ ತಡಕಲು , ತಡಕಲು,ದಯಾನಂದ, ರಮೇಶ್ ಹೊಸೂರು ಇತರರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *