ಸಕಲೇಶಪುರ:- ಸಕಲೇಶಪುರ ತಾಲ್ಲೂಕಿನ ಕುರಭತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆಯಲ್ಲಿ ಹಿಂದಿನ ಐದು ವರ್ಷದ ಒಪ್ಪಂದದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿತ ಹೆಚ್. ಜೆ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ .

ಕುರಭತ್ತೂರು ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 11 ಜನ ಸದಸ್ಯರಿದ್ದು, ಕಾಂಗ್ರೆಸ್ ಬೆಂಬಲಿತ 6, ಬಿಜೆಪಿ ಬೆಂಬಲಿತ 2,ಹಾಗೂ ಜೆಡಿಎಸ್ ಬೆಂಬಲಿತ 3 ಸದಸ್ಯರಿದ್ದು,ಈಗ ಈ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಹಿಂದುಳಿದ ವರ್ಗ ಎ ( ಬಿಸಿಎಂ ಎ ) ಬಂದಿದ್ದು, ಹಿಂದಿನಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದವರ ಒಪ್ಪಂದದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಹೆಚ್ ಜೆ ಶಾಂತಮ್ಮರವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು .

ಚುನಾವಣಾ ಅಧಿಕಾರಿಯಾಗಿ ತಾಲ್ಲೂಕು ದಂಡಾಧಿಕಾರಿಯಾದ ಮೇಘನ. ಜೆ ಅವರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಹೆಚ್. ಜೆ ಶಾಂತಮ್ಮನವರು ಮಾತನಾಡುತ್ತಾ ” ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗಾಗಿ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿಯತ್ತ ಪ್ರಾಮಾಣಿಕ ಕೆಲಸ ಮಾಡುತ್ತೇನೆ. ನನ್ನ ಈ ಅಧ್ಯಕ್ಷ ಸ್ಥಾನಕ್ಕೆರಲು ಸಹಕರಿಸಿದ ಜೆಡಿಎಸ್ ಹಾಗೂ ಕಾಂಗ್ರೆಸ್ ಎಲ್ಲಾ ಬೆಂಬಲಿತ ಸದಸ್ಯರಿಗೆ ನನ್ನ ಧನ್ಯವಾದಗಳು. ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿರುದ್ದಿ ಬ್ಯಾಂಕ್ ( ಪಿ ಎಲ್ ಡಿ ) ಮಾಜಿ ಅಧ್ಯಕ್ಷ ರಾದ ಹೆಚ್. ಹೆಚ್ ಉದಯ್,ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಿ.ಟಿ ಕಿರಣ್, ಕಾಂಗ್ರೆಸ್ ಮುಖಂಡರಾದ ಕೆ. ಡಿ ಮಂಜುನಾಥ್, ವಸಂತ್, ಕುರುಭತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ನಿರ್ದೇಶಕರಾದ ನವೀನ್ ಹಡ್ಲಹಳ್ಳಿ, ಕುರುಭತೂರು ಗ್ರಾಮಪಂಚಾಯಿತಿ ಸದಸ್ಯರಾದ ಹೂವಣ್ಣ, ಕಾಂಗ್ರೆಸ್ ಮುಖಂಡರಾದ ಕಾರ್ತಿಕ್,ಗ್ರಾಮ ಪಂಚಾಯಿತಿಯ ಸದಸ್ಯರುಗಳು ಹಾಗೂ ಕಾಂಗ್ರೆಸ್ ಮುಖಂಡರು ಜೆಡಿಎಸ್ ಮುಖಂಡರುಗಳು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *