ಕರ್ನಾಟಕ : ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಎನ್ನುವಂತೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಮತ್ತೆ ವಿಸ್ತರಣೆ ಮಾಡಿದೆ.

ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸದ್ದು, ದಿನಾಂಕ 01-04-2019ಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಸರ್ಕಾರ ದಿನಾಂಕ 17-08-2023ರಲ್ಲಿ ಅಧಿಸೂಚನೆ ಹೊರಡಿಸಿತ್ತು.

ಅಲ್ಲದೇ ಕಾಲಮಿತಿಯನ್ನು ನಿಗದಿ ಪಡಿಸಿತ್ತು ಎಂದಿದೆ.

ಇನ್ನೂ ಅನೇಕ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ್ದಾರೆ.

ಈ ಹಿನ್ನಲೆಯಲ್ಲಿ ದಿನಾಂಕ 31-03-2025ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿದಂತ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಅಂತ ತಿಳಿಸಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *