ಪೋಲಿಸ್ ಇಲಾಖೆಯ ವತಿಯಿಂದ ಸಕಲೇಶಪುರ ಮತ್ತು ಆಲೂರು ತಾಲೂಕುಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯನ್ನು ಡಿವೈಎಸ್ಪಿ ಪ್ರಮೋದ್ ಕುಮಾರ್ ನೇತೃದಲ್ಲಿ ಪಟ್ಟಣದ ಲಯನ್ಸ್ ಸೇವಾ ಮಂದಿರದಲ್ಲಿ ಮಂಗಳವಾರ ನಡೆಸಲಾಯಿತು.

ಸಭೆಗೆ ಹಾಜರಾದ ಮುಖಂಡರು ಆಲೂರು ಮತ್ತು ಸಕಲೇಶಪುರ ತಾಲೂಕಿನಲ್ಲಿ ಬಹುತೇಕ ಪರಿಶಿಷ್ಟ ಗ್ರಾಮಗಳಲ್ಲಿ ಅಕ್ರಮ ಮಧ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು ಅಬಕಾರಿ ಇಲಾಖೆಯ ಅಧಿಕಾರಿಗಳು ವಿಫಲವಾಗಿದ್ದಾರೆ ಇದೆ ರೀತಿ ಮುಂದುವೆರದರೆ ಇಲಾಖೆಯ ವಿರುದ್ದ ಪ್ರತಿಭಟನೆ ನಡೆಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪರಿಶಿಷ್ಟ ಜಾತಿ ದೌರ್ಜನ್ಯ ಕಾಯಿದೆಯ ಪ್ರಕರಣಗಳು ನ್ಯಾಯಾಲಯಗಳಲ್ಲಿ ಬಿ ರಿಪೋರ್ಟ್‌ನಿಂದಾಗಿ ಶಿಕ್ಷೆ ಕೊಡಿಸುವಲ್ಲಿ ಪೋಲೀಸ್ ಇಲಾಖೆ ವಿಫಲವಾಗಿವೆ, ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಇಟ್ಟಿರುವ ಅಂಭೇಡ್ಕರ್ ಪ್ರತಿಮೆಯನ್ನು ಸುರಕ್ಷತಾ ದೃಷ್ಠಿಯಿಂದ ಪುರಸಭೆಯವರು ಪುರಭವನದ ಮುಂಭಾಗ ಪ್ರತಿಷ್ಠಾಪಿಸಬೇಕು, ಕೂಲಿ ಅರಸಿಕೊಂಡು ಹೊರಜಿಲ್ಲೆಗಳಿಂದ ತಾಲೂಕಿನ ಕಾಫಿ ತೋಟಗಳಲ್ಲಿ ಕೆಲಸಮಾಡುವ ಕಾರ್ಮಿಕರಿಗೆ ತೋಟದ ಮಾಲೀಕರಿಂದ ಕೂಲಿ ಕೊಡದೆ ದೌರ್ಜನ್ಯ ಮಾಡುತ್ತಿರುವ ಪ್ರಕರಣಗಳು ನಡೆಯುತ್ತಿದ್ದು ಇತ್ತೀಚೆಗೆ ಹಾನುಬಾಳು ಹೋಬಳಿಯ ದೇವಲಕೆರೆ ಗ್ರಾಮದಲ್ಲಿ ಇಂತಹ ಘಟನೆಯೊಂದು ನಡೆದಿದ್ದು ಇದನ್ನು ಪೋಲೀಸರು ಪತ್ತೆಹಚ್ಚಿ ಅವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂಬ ಮನವಿಯನ್ನು ಸಹ ಮಾಡಲಾಯಿತು.

ರಾಷ್ಟ್ರೀಯ ಹೆದ್ದಾರಿ ಕೌಡಳ್ಳಿಗೆ ಹೋಗುವ ಮಾರ್ಗದಲ್ಲಿ ಈಗಾಗಲೇ ಅಪಘಾತದಲ್ಲಿ ಮೂರು ಜನರು ಮೃತಪಟ್ಟಿದ್ದು ಯಾವ ವಾಹನಗಳು ಅಪಘಾತ ಮಾಡಿ ಚಲಿಸುತ್ತವೆ ಎಂಬುದನ್ನು ಖಚಿತ ಪಡಿಸಿಕೊಳ್ಳಲು ಸಿಸಿ ಕ್ಯಾಮರ ಅಳವಡಿಸಬೇಕು ಪಟ್ಟಣ ಭಾಗದಲ್ಲಿ ಕೆಲವು ಭಾಗಗಳಲ್ಲಿ ಹಮ್ಸ್ ಹಾಕುವ ಮೂಲಕ ವಾಹನಗಳ ವೇಗವನ್ನು ನಿಯಂತ್ರಣ ಮಾಡಬೇಕೆಂದು ಪುರಸಭೆ ಮಾಜಿ ಅದ್ಯಕ್ಷ ಕಾಡಪ್ಪ ಮನವಿ ಮಾಡಿದರು.

ಸಭೆಯಲ್ಲಿ ಆರಕ್ಷಕ ವೃತ್ತ ನಿರೀಕ್ಷಕ ನಿರಂಜನ್,ನಗರ ವೃತ್ತ ನಿರೀಕ್ಷಕ ಜಗದೀಶ್, ಪುರಸಭೆ ಮುಖ್ಯಾಧಿಕಾರಿ ಮಹೇಶ್ವರಪ್ಪ,ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್ ಪರಮೇಶ್ ಆಲೂರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಆಲೂರು ಸಕಲೇಶಪುರ ತಾಲೂಕಿನ ವಿವಿದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಂಘಟನೆಗಳ ಮುಖಂಡರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *